ನವದೆಹಲಿ: ದೇಶದಲ್ಲಿ ಸರಕು ಮತ್ತು ಸೇವಾ ತೆರಿಗೆ ಜಾರಿಗೆ ಬಂದು ಒಂದು ವರ್ಷಗಳಾಗಿವೆ. ಇದರ ಸ್ಮರಣಾರ್ಥ ನಾಳೆ ಜಿಎಸ್ಟಿ ವರ್ಷಾಚರಣೆ ನಡೆಸಲು ನಿರ್ಧರಿಸಲಾಗಿದೆ.
ಭಾರತ ಸರ್ಕಾರ ಜುಲೈ 1ನ್ನು ಜಿಎಸ್ಟಿ ದಿನವನ್ನಾಗಿ ಆಚರಿಸುವುದಾಗಿ ಘೋಷಣೆ ಮಾಡಿದೆ. 2017ರ ಜೂನ್ 30ರ ಮಧ್ಯರಾತ್ರಿ ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ಸಮಾರಂಭವನ್ನು ಏರ್ಪಡಿಸಿ ಜಿಎಸ್ಟಿ ಜಾರಿಗೊಳಿಸಲಾಗಿತ್ತು.
ಜುಲೈ 1ರಂದು ‘ಒಂದು ರಾಷ್ಟ್ರ, ಒಂದು ತೆರಿಗೆ, ಒಂದು ಮಾರುಕಟ್ಟೆ’ ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ) ದೇಶದಾದ್ಯಂತ ಅನುಷ್ಠಾನಗೊಂಡಿತ್ತು. ಈ ಹಿನ್ನಲೆಯಲ್ಲಿ ಸರ್ಕಾರ ಈ ದಿನವನ್ನು ಜಿಎಸ್ಟಿ ದಿನವನ್ನಾಗಿ ಆಚರಿಸಲು ನಿರ್ಧರಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.