ಜಮ್ಮು: ಜಮ್ಮು ಕಾಶ್ಮೀರದ ಗಡಿ ಜಿಲ್ಲೆಯಾದ ರಜೌರಿಯಲ್ಲಿ ಸುಮಾರು 1.02 ಲಕ್ಷ ಶೌಚಾಲಯಗಳು ನಿರ್ಮಾಣಗೊಂಡಿದ್ದು, ಇದೀಗ ಅದು ಬಯಲು ಶೌಚ ಮುಕ್ತ ಜಿಲ್ಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಸ್ವಚ್ಛ ಭಾರತ ಅಭಿಯಾನ-ಗ್ರಾಮೀಣ-ದಡಿಯಲ್ಲಿ ಈ ಜಿಲ್ಲೆ ಮಹತ್ವದ ಸಾಧನೆಯನ್ನು ಮಾಡಿದೆ. ಸರ್ಕಾರಿ ಇಲಾಖೆಗಳು, ಗ್ರಾಮೀಣ ಸಮುದಾಯಗಳು ನಡೆಸಿದ ಅಭಿಯಾನ ಇಲ್ಲಿ ಫಲಕೊಟ್ಟಿದೆ. ಪ್ರತಿ ಕುಟುಂಬಗಳೂ ಶೌಚಾಲಯವನ್ನು ಹೊಂದುವಂತಾಗಿದೆ.
ಭಯೋತ್ಪಾದಕ ಉಪಟಳ ಇರುವ ಈ ಜಿಲ್ಲೆಯಲ್ಲಿ ಎಲ್ಲಾ ರೀತಿಯ ಮೂಲಸೌಕರ್ಯಗಳನ್ನು ಒದಗಿಸುವ ಕಾರ್ಯ ಭರದಿಂದ ಸಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.