ಗುಜರಾತ್: ಗುಜರಾತ್ನ ಹಿರಿಯ ಕಾಂಗ್ರೆಸ್ ಶಾಸಕ ಮತ್ತು ಕೋಲಿ ಸಮುದಾಯದ ಪ್ರಮುಖ ನಾಯಕ ಕುನ್ವರ್ಜಿ ಬವಲಿಯಾ ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಭಾರತೀಯ ಜನತಾ ಪಕ್ಷ (ಬಿಜೆಪಿ)ಕ್ಕೆ ಸೇರ್ಪಡೆಗೊಂಡಿದ್ದಾರೆ. ಈ ಮೂಲಕ ಅವರು ವಿಜಯ ರೂಪಾನಿ ಸರ್ಕಾರದಲ್ಲಿ ಸ್ಥಾನ ಪಡೆದುಕೊಳ್ಳುವ ಸಾಧ್ಯತೆಯಲ್ಲಿದ್ದಾರೆ.
ಗುಜರಾತ್ ಅಸೆಂಬ್ಲಿ ಸ್ಪೀಕರ್ ರಾಜೇಂದ್ರ ತ್ರಿವೇದಿ ಅವರನ್ನು ಭೇಟಿಯಾಗಿ ರಾಜೀನಾಮೆ ಪತ್ರವನ್ನು ಸಲ್ಲಿಸಿ, ತದನಂತರ ರಾಜ್ಯದ ಬಿಜೆಪಿ ಪ್ರಧಾನ ಕಛೇರಿ ’ಶ್ರೀ ಕಮಲಂ’ನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಜಿತು ವಘಾನಿ ಅವರ ಉಪಸ್ಥಿತಿಯಲ್ಲಿ ಬವಲಿಯಾ ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು. ಬವಲಿಯಾ ಅವರು 4 ಬಾರಿ ರಾಜ್ಕೋಟ್ ಜಿಲ್ಲೆಯ ಜಸ್ದನ್ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದಾರೆ.
ಬವಲಿಯಾ ಅವರು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿಯಾಗಿ, ’ಗುಜರಾತ್ನ ಕಾಂಗ್ರೆಸ್ ಯುವ ನಾಯಕರುಗಳಾದ ಅಮಿತ್ ಚಾವ್ಡಾ ಮತ್ತು ಪರೇಶ್ ಧನಾನಿ ಅವರ ನೇತೃತ್ವ ನಾಯಕತ್ವ ಅತೃಪ್ತಿ ಮೂಡಿಸಿರುವುದರಿಂದ ರಾಜೀನಾಮೆ ನೀಡುತ್ತಿರುವುದಾಗಿ’ ಹೇಳಿದ್ದಾರೆ.
‘ರಾಹುಲ್ ಗಾಂಧಿ ಮತ ಬ್ಯಾಂಕ್ಗಾಗಿ ರಾಜಕೀಯವನ್ನು ಮಾಡುತ್ತಾರೆ. ಇದರಿಂದಾಗಿ ನಾನು ನನ್ನ ಕ್ಷೇತ್ರದ ಜನರಿಗೆ ಸರಿಯಾಗಿ ಸೇವೆ ಮಾಡಲಾಗುತ್ತಿಲ್ಲ. ನಾನು ಗಮನಿಸಿದ ಪ್ರಕಾರ ಪ್ರಧಾನಿ ಮೋದಿಯವರು ರಾಷ್ಟ್ರವನ್ನು ಅಭಿವೃದ್ಧಿಯ ಕಡೆಗೆ ಮುನ್ನಡೆಸುತ್ತಿದ್ದಾರೆ. ನನಗೆ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಷಾ ಮತ್ತು ರಾಜ್ಯ ನಾಯಕತ್ವದಲ್ಲಿ ಸಂಪೂರ್ಣ ನಂಬಿಕೆ ಇದೆ.’ ಎಂದು ಬಿಜೆಪಿ ಸೇರ್ಪಡೆಗೊಂಡ ಬವಲಿಯಾ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.