ನವದೆಹಲಿ: ಎನ್ಡಿಎ ಸರಕಾರ ಅಧಿಕಾರಕ್ಕೆ ಬಂದ ನಂತರ ಕೇಂದ್ರ ಸರ್ಕಾರವು ಒಂದು ಕೋಟಿಗೂ ಅಧಿಕ ಜನರಿಗೆ ಉದ್ಯೋಗಾವಕಾಶ ನೀಡಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿಸುವಲ್ಲಿ ವಿಫಲವಾಗಿದೆ ಎಂದು ವಿರೋಧ ಪಕ್ಷಗಳು ಸುಳ್ಳು ಆಪಾದನೆಯನ್ನು ಮಾಡುತ್ತಿವೆ. ಪ್ರಧಾನಿ ಮೋದಿ ಸರ್ಕಾರವು ಲಕ್ಷಾಂತರ ಉದ್ಯೋಗಗಳನ್ನು ಸೃಷ್ಟಿಸುತ್ತಿರುವುದು ನಿಜ ಸಂಗತಿ. ‘ನನ್ನ(ರಸ್ತೆ ಸಾರಿಗೆ) ಇಲಾಖೆಯಲ್ಲಿ ಒಂದು ಕೋಟಿ ಯುವಕರಿಗೆ ಉದ್ಯೋಗ ನೀಡಲಾಗಿದೆ’ ಎಂದು ಅವರು ಹೇಳಿದ್ದಾರೆ.
ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ‘ನನ್ನ ಇಲಾಖೆ ಸುಮಾರು 10 ಲಕ್ಷ ಕೋಟಿ ಮೌಲ್ಯದ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ ಹಾಗೂ ಅದನ್ನು ಸಾಬೀತುಪಡಿಸಲು ಸರಿಯಾದ ಅಂಕಿಅಂಶಗಳನ್ನು ನಾನು ಹೊಂದಿದ್ದೇನೆ. ಈ ಯೋಜನೆಗಳು ಹೆದ್ದಾರಿ, ಸಾಗಣೆ, ಬಂದರು, ಒಳನಾಡಿನ ಜಲಮಾರ್ಗಗಳು, ಜಲ ಸಂಪನ್ಮೂಲ ಮತ್ತು ಹೀಗೆ ಹಲವು ವಿಭಾಗಗಳನ್ನು ಹೊಂದಿವೆ. ಈ ಇಲಾಖೆಗಳು ಬಹಳಷ್ಟು ನೇರ ಮತ್ತು ಪರೋಕ್ಷ ಉದ್ಯೋಗಗಳನ್ನು ಸೃಷ್ಟಿಸುತ್ತವೆ’ ಎಂದು ಗಡ್ಕರಿಯವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.