ನಾಗ್ಪುರ: ಮಕ್ಕಳನ್ನು ನೋಡಿಕೊಳ್ಳುವ ಸಲುವಾಗಿ ಮಹಿಳಾ ಸರ್ಕಾರಿ ಉದ್ಯೋಗಿಗಳಿಗೆ 180 ದಿನಗಳ ವೇತನ ಸಹಿತ ರಜೆಯನ್ನು ಮಹಾರಾಷ್ಟ್ರ ಸರ್ಕಾರ ಘೋಷಿಸಿದೆ.
ಮಕ್ಕಳಿಗೆ 18 ವರ್ಷ ತುಂಬುವುದರೊಳಗೆ ಉದ್ಯೋಗಸ್ಥ ತಾಯಂದಿರು ಈ ರಜೆಯನ್ನು ಪಡೆದುಕೊಳ್ಳಬಹುದಾಗಿದೆ. ಪತ್ನಿಯನ್ನು ಕಳೆದುಕೊಂಡಿರುವ 18 ವರ್ಷದೊಳಗಿನ ಮಕ್ಕಳಿರುವ ಪುರುಷ ಉದ್ಯೋಗಿಗಳು ಕೂಡಾ ಈ ರಜೆಯನ್ನು ಪಡೆದುಕೊಳ್ಳಲು ಅರ್ಹರು.
ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಮಹಾರಾಷ್ಟ್ರದ ವಿತ್ತ ಸಚಿವರು ಹೇಳಿದ್ದಾರೆ.
10 ಮತ್ತು 12 ನೇ ತರಗತಿಯಲ್ಲಿ ಓದುತ್ತಿರುವ ಮಕ್ಕಳ ಸರ್ಕಾರಿ ಉದ್ಯೋಗಿ ತಾಯಂದಿರಿಗೆ ಈ ರಜೆ ಪ್ರಯೋಜನಕಾರಿಯಾಗಿದೆ. ವರ್ಷಕ್ಕೆ 3 ಬಾರಿಯಂತೆ ಈ ರಜೆಯನ್ನು ಪಡೆದುಕೊಳ್ಳಬಹುದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.