ನವದೆಹಲಿ : ದೇಶದ ರೈತರಿಗೆ ಮೋದಿ ಸರ್ಕಾರ ಬಂಪರ್ ಗಿಫ್ಟ್ ನೀಡಿದೆ. ರೈತರ ಕೃಷಿ ಬೆಳೆಗಳಿಗೆ ಅತಿ ಹೆಚ್ಚು ಬೆಂಬಲ ನೀಡುವ ಮೂಲಕ ಇತಿಹಾಸದಲ್ಲೇ ಹೊಸ ಅಲೆಯನ್ನು ಮೋದಿ ಸರ್ಕಾರ ಸೃಷ್ಟಿಸಿದೆ.
2018-2019ರ ಅವಧಿಯಲ್ಲಿ ಬೆಳೆಯಲಾಗುವ ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ(ಎಮ್ಎಸ್ಪಿ)ಯನ್ನು ಹೆಚ್ಚಿಸಿರುವ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿಯ ನಡೆಯನ್ನು ಗೃಹ ಸಚಿವ ರಾಜನಾಥ ಸಿಂಗ್ ಶ್ಲಾಘಿಸಿದ್ದಾರೆ.
‘ಇದೊಂದು ಐತಿಹಾಸಿಕ ನಿರ್ಧಾರವಾಗಿದೆ. ರೈತರು ಅತೀ ದೊಡ್ಡ ಉತ್ಪಾದಕರು ಹಾಗೂ ಗ್ರಾಹಕರೂ ಆಗಿದ್ದಾರೆ. ಅವರು ತಮ್ಮ ಬಾಕಿಯನ್ನು ಎಂದೂ ಸ್ವೀಕರಿಸಿರಲಿಲ್ಲ, ಆದರೆ ನಮ್ಮ ಸರ್ಕಾರ ಈಗ ಅದನ್ನು ಬದಲಾಯಿಸುತ್ತಿದೆ.’ ಎಂದು ಮಾಧ್ಯಮಗಳಿಗೆ ರಾಜನಾಥ್ ಸಿಂಗ್ ಹೇಳಿದ್ದಾರೆ.
ಕಳೆದ ತಿಂಗಳು ಪ್ರಧಾನಿ ಮೋದಿ 2018-19ರ ಅವಧಿಯಲ್ಲಿನ ಮುಂಗಾರು ಬೆಳೆಗಳಿಗೆ ಇನ್ಪುಟ್ ದರದ ಶೇ. 150ರಷ್ಟು ಕನಿಷ್ಠ ಬೆಂಬಲ ಬೆಲೆ(ಎಮ್ಎಸ್ಪಿ)ಯನ್ನು ಅನುಮೋದಿಸಲಾಗುವುದು ಎಂದು ಘೋಷಿಸಿದ್ದರು. ಅದರಂತೆ ಇದೀಗ ಸುಮಾರು 14 ವಿವಿಧ ಬೆಳೆಗಳಿಗೆ ಬೆಂಬಲ ಬೆಲೆಯನ್ನು ಘೋಷಿಸಲಾಗಿದೆ.
‘ನಮ್ಮ ಸರ್ಕಾರದ ಭರವಸೆಯಂತೆ 2022ರ ಹೊತ್ತಿಗೆ ರೈತರ ಆದಾಯವನ್ನು ದ್ವಿಗುಣಗೊಳಿಸುವುದು ನಮ್ಮ ಮುಖ್ಯ ಧ್ಯೇಯವಾಗಿದೆ. ಈ ನಿರ್ಧಾರ ರೈತರ ಖರೀದಿಯ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ ಮತ್ತು ಇದರಿಂದ ಆರ್ಥಿಕತೆಯಲ್ಲಿ ಒಳ್ಳೆಯ ಪರಿಣಾಮಗಳನ್ನು ನಾವು ಕಾಣಬಹುದು’ ಎಂದು ಸಂಪುಟ ಸಭೆಯಲ್ಲಿ ರಾಜನಾಥ್ ಸಿಂಗ್ ಹೇಳಿದ್ದಾರೆ.
ಹೊಸ MSP ದರಗಳ ವಿವರ :
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.