ನವದೆಹಲಿ: ಭಾರತ ಸರ್ಕಾರದ ಸಹಾಯಕ ಕಾರ್ಯದರ್ಶಿಗಳಾಗಿ ಇತ್ತೀಚಿಗೆ ನೇಮಕಗೊಂಡ ಸುಮಾರು 170 ಯುವ ಐಎಎಸ್ ಅಧಿಕಾರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಸಂವಾದ ನಡೆಸಿದರು.
ಯುವ ಅಧಿಕಾರಿಗಳ ಫೀಲ್ಡ್ ಟ್ರೈನಿಂಗ್ ಅನುಭವಗಳ ಬಗ್ಗೆ ಕೇಳಿ ತಿಳಿದುಕೊಂಡ ಮೋದಿ, ಅವರೊಂದಿಗೆ ಉತ್ತಮ, ಜನಭಾಗಿತ್ವ, ಸಂಪನ್ಮೂಲಗಳ ಸಮರ್ಪಕ ಬಳಕೆ ಮುಂತಾದುವುಗಳ ಬಗ್ಗೆ ವಿಚಾರ ವಿನಿಮಯ ಮಾಡಿಕೊಂಡರು.
ಇತ್ತೀಚಿಗೆ ಸರ್ಕಾರ ಅನುಷ್ಠಾನಕ್ಕೆ ತಂದಿರುವ ಗ್ರಾಮ ಸ್ವರಾಜ್ ಅಭಿಯಾನ, ಆಯುಷ್ಮನ್ ಭಾರತ ಯೋಜನೆಗಳ ಬಗ್ಗೆ ಚರ್ಚೆ ನಡೆಸಿದರು.
ಕಾರ್ಯಕ್ರಮದಲ್ಲಿ ಪಿಎಂಓ ರಾಜ್ಯ ಖಾತೆ ಸಚಿವ ಜಿತೇಂದ್ರ ಸಿಂಗ್, ವೈಯಕ್ತಿಕ ಮತ್ತು ತರಬೇತಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.