ಗಾಂಧೀನಗರ: ಅಪೌಷ್ಠಿಕತೆಯನ್ನು ನಿವಾರಣೆ ಮಾಡುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತಗೊಂಡಿರುವ ಗುಜರಾತ್ ಸರ್ಕಾರ, ತನ್ನ ರಾಜ್ಯದಲ್ಲಿ ‘ಪೋಷಣ್ ಅಭಿಯಾನ’ವನ್ನು ಆರಂಭಿಸಿದೆ. ಈ ಯೋಜನೆಯಿಂದ ಸುಮಾರು 60 ಲಕ್ಷ ಜನರಿಗೆ ಪ್ರಯೋಜನವಾಗಲಿದೆ.
ಅಪೌಷ್ಠಿಕತೆಯ ಸಮಸ್ಯೆಯಿಂದ ಬಳಲುತ್ತಿರುವ ಜಿಲ್ಲೆಗಳ ಮಕ್ಕಳು, ಬಾಲಕಿಯರು, ಗರ್ಭಿಣಿ ಸ್ತ್ರೀಯರು ಈ ಯೋಜನೆಯಡಿ ಬರಲಿದ್ದಾರೆ. ನವಜಾತ ಶಿಶುಗಳು ಮತ್ತು ತಾಯಂದಿರು 1000 ದಿನಗಳ ಕಾಲ ಉತ್ತಮ ಪೌಷ್ಠಿಕ ಆಹಾರ ಪಡೆದುಕೊಳ್ಳುವಂತೆ ಈ ಯೋಜನೆ ನೋಡಿಕೊಳ್ಳಲಿದೆ.
ಅಲ್ಲದೇ 14ರಿಂದ 18 ವರ್ಷ ವಯಸ್ಸಿನ ಹೆಣ್ಣು ಮಕ್ಕಳ ಅಪೌಷ್ಠಿಕತೆಯನ್ನು ಹೋಗಲಾಡಿಸುವ ಸಲುವಾಗಿ ‘ಪೂರ್ಣ’ ಎಂಬ ಯೋಜನೆಯನ್ನೂ ಆರಂಭಿಸಲಾಗಿದೆ. ಭವಿಷ್ಯದಲ್ಲಿ ತಾಯಂದಿರಾಗುವ ಈ ಹೆಣ್ಣು ಮಕ್ಕಳ ಅಪೌಷ್ಠಿಕತೆಯನ್ನು ಹೋಗಲಾಡಿಸಲು ಈ ಯೋಜನೆಯಡಿ ರೂ.270 ಕೋಟಿ ವ್ಯಯಿಸಲಾಗುತ್ತಿದೆ.
ಮಾ.8ರಂದು ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರ ಮಟ್ಟದಲ್ಲಿ ಪೋಷನ್ ಅಭಿಯಾನಕ್ಕೆ ಚಾಲನೆ ನೀಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.