ಹೈದರಾಬಾದ್: ವೋಟಿಗಾಗಿ ನೋಟು ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ನಡುವಿನ ತಿಕ್ಕಾಟ ಮತ್ತಷ್ಟು ಉಲ್ಬಣಗೊಂಡಿದೆ.
ನಾಯ್ಡು ಅವರ ದೂರವಾಣಿ ಕರೆಗಳನ್ನು ಕೆ.ಚಂದ್ರಶೇಖರ್ ರಾವ್ ಕದ್ದಾಲಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಆಂಧ್ರ ಪ್ರದೇಶ ಪೊಲೀಸರು ಸೋಮವಾರ ಪ್ರಕರಣ ದಾಖಲಿಸಿದ್ದಾರೆ. ಐಪಿಸಿಯ 464, 647, 471, 166, 167 ಹಾಗೂ 120ಬಿ ಕಲಂಗಳಡಿ ಪ್ರಕರಣ ದಾಖಲಾಗಿದೆ.
ಸ್ಥಳೀಯ ವಕೀಲ ಎನ್ವಿವಿ ಪ್ರಸಾದ್ ಅವರು ನೀಡಿದ ದೂರಿನ ಹಿನ್ನಲೆಯಲ್ಲಿ ಚಂದ್ರಶೇಖರ್ ರಾವ್ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ವಿಶಾಖಪಟ್ಟಣದ ತ್ರಿಟೌನ್ ಪೊಲೀಸರು ತಿಳಿಸಿದ್ದಾರೆ.
ತೆಲಂಗಾಣದ ಟಿಆರ್ಎಸ್ ಪಕ್ಷದ ಮುಖಂಡರು ಟಿಡಿಪಿ ಸಹೋದ್ಯೋಗಿಗಳ ದೂರವಾಣಿಗಳನ್ನು ಕದ್ದಾಲಿಸುತ್ತಿದ್ದಾರೆ ಎಂದೂ ದೂರಿನಲ್ಲಿ ಆರೋಪಿಸಲಾಗಿದೆ.
ಇಂದು ಬೆಳಿಗ್ಗೆಯಷ್ಟೇ ಚಂದ್ರಶೇಖರ್ ರಾವ್ ಒಡೆತನದ ಮಾಧ್ಯಮವೊಂದರಲ್ಲಿ ನಾಯ್ಡು ವಿರುದ್ಧದ ಆಡಿಯೋವೊಂದು ರಿಲೀಸ್ ಆಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.