ನವದೆಹಲಿ: ದೇಶ ವಿರೋಧಿ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಜೆಎನ್ಯು ವಿದ್ಯಾರ್ಥಿ ಉಮರ್ ಖಲೀದ್ ಮತ್ತು ಇತರ ಇಬ್ಬರು ತಪ್ಪಿತಸ್ಥರು ಎಂದು ಜೆಎನ್ಯು ಉನ್ನತ ಮಟ್ಟದ ತನಿಖಾ ಸಮಿತಿ ವರದಿ ನೀಡಿದೆ. ಈ ಹಿನ್ನಲೆಯಲ್ಲಿ ಖಲೀದ್ನನ್ನು ವಿಶ್ವವಿದ್ಯಾಲಯದಿಂದ ಉಚ್ಛಾಟನೆಗೊಳಿಸಲಾಗಿದೆ. ಮತ್ತೊಬ್ಬ ವಿದ್ಯಾರ್ಥಿ ಕನ್ಹಯ್ಯ ಕುಮಾರ್ ಮೇಲೆ 10 ಸಾವಿರ ರೂಪಾಯಿಗಳ ದಂಡ ವಿಧಿಸಲಾಗಿದೆ.
2016ರ ಫೆಬ್ರವರಿ 9ರಂದು ಉಗ್ರ ಅಫ್ಝಲ್ ಗುರುವಿಗೆ ಮರಣದಂಡನೆ ವಿಧಿಸಿದ್ದನ್ನು ಖಂಡಿಸಿ ಜೆಎನ್ಯು ಆವರಣದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ವೇಳೆ ಖಲೀದ್, ಕನ್ಹಯ್ಯ ಸೇರಿದಂತೆ ಕೆಲ ವಿದ್ಯಾರ್ಥಿಗಳ ಗುಂಪು ದೇಶ ವಿರೋಧಿ ಘೋಷಣೆಗಳನ್ನು ಹಾಕಿತ್ತು. ಈ ಪ್ರಕರಣದ ಬಗ್ಗೆ ತನಿಖೆ ನಡೆಸಲು ಜೆಎನ್ಯು ೫ ಸದಸ್ಯರನ್ನೊಳಗೊಂಡ ಉನ್ನತ ಮಟ್ಟದ ತನಿಖಾ ಸಮಿತಿಯನ್ನು ರಚಿಸಿತ್ತು.
ಈ ಸಮಿತಿಯು ಶಿಸ್ತು ಉಲ್ಲಂಘನೆ ಮಾಡಿದ ಆರೋಪದ ಮೇರೆಗೆ 13 ವಿದ್ಯಾರ್ಥಿಗಳ ವಿರುದ್ಧ ದಂಡ ವಿಧಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.