ನವದೆಹಲಿ: ಹಿಂದೂ ಮತ್ತು ಬೌದ್ಧ ನಾಗರಿಕತೆಯಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳು ಆಳವಾಗಿ ಬೇರೂರಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದು, ಆರ್ಥಿಕ ಮತ್ತು ರಾಜಕೀಯ ಉನ್ನತಿಗಳಾಗುತ್ತಿರುವ ಹಿನ್ನಲೆಯಲ್ಲಿ ಏಷ್ಯಾ ಪ್ರಜಾಪ್ರಭುತ್ವದ ರಾಷ್ಟ್ರಗಳು ಜಾಗತಿಕ ಮಟ್ಟದಲ್ಲಿ ನೀಡುತ್ತಿರುವ ಕೊಡುಗೆಗಳ ವೇಗವರ್ಧಿಸುವ ಅವಶ್ಯಕತೆ ಇದೆ ಎಂದರು.
ಸಂವಾದದ ನಾಲ್ಕನೇ ಸಂಚಿಕೆಗೆ ಮೋದಿಯವರು ‘ಹಂಚಿಕೊಂಡ ಮೌಲ್ಯಗಳು ಮತ್ತು ಏಷ್ಯಾದ ಪ್ರಜಾಪ್ರಭುತ್ವ’ ಎಂಬ ವಿಷಯದ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ್ದು, ಇದರ ವಿಡಿಯೋವನ್ನು ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ.
ಜಪಾನ್ ಪ್ರಧಾನಿ ಶಿಂಜೋ ಅಬೆಯವರೂ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ.
‘ಮುಕ್ತತೆ ಆದರೆ ತತ್ವವಲ್ಲ, ತತ್ವಶಾಸ್ತ್ರದಲ್ಲಿ ತೊಡಗಿಸಿಕೊಳ್ಳವಿಕೆ ಆದರೆ ಸಿದ್ಧಾಂತವಲ್ಲ-ಇದು ನಮ್ಮ ಹಂಚಿಕೊಂಡ ಪ್ರಜಾಪ್ರಭುತ್ವ ಪರಂಪರೆಯ ಸ್ಫೂರ್ತಿ. ಹಿಂದೂ ಮತ್ತು ಬೌದ್ಧ ಎರಡು ಪ್ರಾಚೀನ ನಂಬಿಕೆಗಳ ಈ ತತ್ವಜ್ಞಾನ ಮತ್ತು ಸಾಂಸ್ಕೃತಿಕ ಪರಂಪರೆಗಳು ನಮ್ಮ ಪರಸ್ಪರ ಉತ್ತಮ ಅರ್ಥೈಸಿಕೊಳ್ಳುವಿಕೆಗೆ ಸಹಕಾರಿ’ ಎಂದರು.
ಪ್ರಜಾಪ್ರಭುತ್ವ ಎಂಬುದು ಕೇವಲ ಮತದಾನದ ಪ್ರಕ್ರಿಯೆಯಲ್ಲ, ಸ್ವ-ನಿಯಂತ್ರಣ ಮತ್ತು ಪರಸ್ಪರ ಗೌರವಿಸುವಿಕೆ ಪ್ರಜಾಪ್ರಭುತ್ವವನ್ನು ಕಾರ್ಯನಿರ್ವಹಿಸುವಂತೆ ಮಾಡುತ್ತದೆ ಎಂದು ಪ್ರತಿಪಾದಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.