ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರವಾಸಿಗರಿಗೆ ಉಚಿತ ಸಿಮ್ ಕಾರ್ಡ್ಗಳನ್ನು ನೀಡುವ ಯೋಜನೆಯನ್ನು ಕೇಂದ್ರ ಸರ್ಕಾರ ಸ್ಥಗಿತಗೊಳಿಸಿದೆ.
ವಿದೇಶಿ ಪ್ರವಾಸಿಗರಿಗೆ ಉಚಿತ ಸಿಮ್ ನೀಡುವ ಯೋಜನೆ ಅನಗತ್ಯ ಎಂಬುದನ್ನು ಮನಗಂಡು ಅದನ್ನು ಸ್ಥಗಿತಗೊಳಿಸುತ್ತಿದ್ದೇವೆ ಎಂಬುದಾಗಿ ಪ್ರವಾಸೋದ್ಯಮ ಕಾರ್ಯದರ್ಶಿ ರಶ್ಮಿ ವರ್ಮಾ ಹೇಳಿದ್ದಾರೆ.
ಈ ಯೋಜನೆಯಡಿ ಇ-ವೀಸಾದ ಮೂಲಕ ಭಾರತಕ್ಕೆ ಪ್ರವಾಸಕ್ಕೆ ಆಗಮಿಸುವ ವಿದೇಶಿಗರಿಗೆ ಉಚಿತವಾಗಿ ಆಕ್ಟಿವೇಟೆಡ್ ಸಿಮ್ ಕಾರ್ಡ್ಗಳನ್ನು ನೀಡಲಾಗುತ್ತಿತ್ತು. ದೇಶದಲ್ಲಿ ಅವರ ಸಂವಹನ ಸಂಪರ್ಕಗಳು ಸುಲಲಿತವಾಗಿರಲಿ ಎಂಬ ಉದ್ದೇಶದಿಂದ ಈ ಯೋಜನೆಯನ್ನು ಕಳೆದ ಫೆಬ್ರವರಿಯಲ್ಲಿ ಆರಂಭಿಸಲಾಗಿತ್ತು.
ಆದರೆ ವಿದೇಶಿ ಪ್ರವಾಸಿಗರು ಸಾಮಾಜಿಕ ಜಾಲತಾಣ, ಆಪ್, ವೈಫೈ ಸೌಲಭ್ಯಗಳನ್ನು ಬಳಸುತ್ತಿದ್ದಾರೆ, ಹೀಗಾಗಿ ಉಚಿತ ಸಿಮ್ ಕಾರ್ಡ್ ಯೋಜನೆ ಅನಗತ್ಯವಾಗಿದೆ ಎಂದು ವರ್ಮಾ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.