ನವದೆಹಲಿ: ಉದ್ಯಮ ಸ್ನೇಹಿ ರಾಜ್ಯಗಳ ಪಟ್ಟಿಯಲ್ಲಿ ಆಂಧ್ರಪ್ರದೇಶ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ, ತೆಲಂಗಾಣ ಎರಡನೇ ಸ್ಥಾನ, ಹರಿಯಾಣ ಮೂರನೇ ಸ್ಥಾನ ಪಡೆದುಕೊಂಡಿದೆ. ಕರ್ನಾಟಕ 8ನೇ ಸ್ಥಾನದಲ್ಲಿದೆ.
ಕೇಂದ್ರ ಕೈಗಾರಿಕ ನೀತಿ ಮತ್ತು ಪ್ರಚಾರ ಇಲಾಖೆ, ವಿಶ್ವಬ್ಯಾಂಕ್ ಜಂಟಿಯಾಗಿ ಸಮೀಕ್ಷೆ ನಡೆಸಿ ಉದ್ಯಮ ಸ್ನೇಹಿ ರಾಜ್ಯಗಳ ಪಟ್ಟಿಯನ್ನು ಸಿದ್ಧಪಡಿಸಿವೆ. ಈ ಪಟ್ಟಿ ಮಂಗಳವಾರ ಬಿಡುಗಡೆಗೊಂಡಿದೆ.
ಪಟ್ಟಿಯಲ್ಲಿ ಝಾರ್ಖಂಡ್ 4ನೇ ಸ್ಥಾನ, ಗುಜರಾತ್ 5ನೇ ಸ್ಥಾನ ಪಡೆದುಕೊಂಡಿದೆ. ಛತ್ತೀಸ್ಗಢ, ಮಧ್ಯಪ್ರದೇಶ ಕ್ರಮವಾಗಿ 6 ಮತ್ತು 7ನೇ ಸ್ಥಾನ ಪಡೆದುಕೊಂಡಿದೆ. ಕರ್ನಾಟಕ 8ನೇ ಸ್ಥಾನದಲ್ಲಿದೆ. ರಾಜಸ್ಥಾನ 9 ಮತ್ತು ಪಶ್ಚಿಮಬಂಗಾಳ 10ನೇ ಸ್ಥಾನದಲ್ಲಿದೆ.
ಪ್ರತಿ ರಾಜ್ಯಗಳ ಕೈಗಾರಿಕ ನೀತಿ, ವಾಣಿಜ್ಯ ಸುಧಾರಣಾ ಕ್ರಮಗಳ ಆಧಾರದಲ್ಲಿ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.