ಮುಕ್ತ್ಸರ್: ಕಳೆದ 70 ವರ್ಷಗಳಿಂದ ಕಾಂಗ್ರೆಸ್ ಸರ್ಕಾರ ರೈತರಿಗೆ ಸುಳ್ಳು ಭರವಸೆ ನೀಡುತ್ತಾ ಬಂದಿದೆ, ರೈತರ ಏಳಿಗೆಗಾಗಿ ಆ ಪಕ್ಷ ಏನನ್ನೂ ಮಾಡಿಲ್ಲ, ಕೇವಲ ಅವರನ್ನು ವೋಟ್ ಬ್ಯಾಂಕ್ಗಳನ್ನಾಗಿ ಮಾಡಿಕೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.
ಪಂಜಾಬ್ನ ಮಲೌತ್ನಲ್ಲಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ’70 ವರ್ಷಗಳಿಂದ ನಮ್ಮ ರೈತರು ನಂಬಿಕೆಯಿರಿಸಿದ್ದ ಪಕ್ಷ ಅವರ ಪರಿಶ್ರಮಕ್ಕೆ ತಕ್ಕ ಫಲವನ್ನು ನೀಡಿಲ್ಲ. ಕೇವಲ ರೈತರಿಗೆ ಸುಳ್ಳು ಭರವಸೆಗಳನ್ನು ನೀಡುತ್ತಾ ಬಂದಿದೆ, ಆ ಪಕ್ಷ ಒಂದು ಕುಟುಂಬಕ್ಕಾಗಿ ಮಾತ್ರ ಕೆಲಸ ಮಾಡಿದೆ’ ಎಂದರು.
ಪ್ರಸ್ತುತ ನಮ್ಮ ಎನ್ಡಿಎ ಸರ್ಕಾರ ರೈತರಿಗಾಗಿ ಸಾಕಷ್ಟು ಕಾರ್ಯಗಳನ್ನು ಮಾಡಿದೆ, ಹೀಗಾಗಿ ರೈತರು ನೆಮ್ಮದಿಯಿಂದ ನಿದ್ರಿಸುತ್ತಿದ್ದಾರೆ ಎಂದರು.
ಭಾರತವನ್ನು ಕೃಷಿ ಶಕ್ತಿಯನ್ನಾಗಿ ಪರಿವರ್ತಿಸುವಲ್ಲಿ ಪಂಜಾಬ್ ರೈತರ ಪಾತ್ರ ಮಹತ್ವದ್ದು, ಕೃಷಿ ಉತ್ಪಾದನೆಯಲ್ಲಿ ಎಲ್ಲಾ ದಾಖಲೆಯನ್ನ ಮುರಿದಿರುವ ಅವರ ಪರಿಶ್ರಮಕ್ಕೆ ನಾನು ತಲೆಬಾಗುತ್ತೇನೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.