ನವದೆಹಲಿ: 17 ರಾಜ್ಯಗಳಲ್ಲಿನ ಅಂತಾರಾಷ್ಟ್ರೀಯ ಗಡಿಗಳ ಸಮೀಪದಲ್ಲಿರುವ ಗ್ರಾಮಗಳ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ 2017-18ನೇ ಸಾಲಿನಲ್ಲಿ ರೂ.1,100 ಕೋಟಿಗಳನ್ನು ಬಿಡುಗಡೆ ಮಾಡಿದೆ ಎಂದು ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಗಡಿಯುದ್ದಕ್ಕೂ ಆರೋಗ್ಯ ಕೇಂದ್ರ, ಶಾಲೆ, ಕುಡಿಯುವ ನೀರು ಇತ್ಯಾದಿ ವ್ಯವಸ್ಥೆಗಳನ್ನೊಳಗೊಂಡ 61 ಮಾದರಿ ಗ್ರಾಮಗಳನ್ನು ಅಭಿವೃದ್ಧಿಪಡಿಸುತ್ತಿದ್ದೇವೆ, ಈ ಉದ್ದೇಶಕ್ಕಾಗಿ ರೂ.126 ಕೋಟಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದಿದ್ದಾರೆ.
ಬಾರ್ಡರ್ ಏರಿಯಾ ಡೆವಲಪ್ಮೆಂಟ್ ಪ್ರೋಗ್ರಾಂ(ಬಿಎಡಿಪಿ)ಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಗೃಹ ಸಚಿವಾಲಯದ ಉನ್ನತ ಮಟ್ಟದ ಸಭೆಯಲ್ಲಿ ಚರ್ಚಿಸಲಾಗುತ್ತದೆ, ಈ ಸಭೆಗೆ 17 ರಾಜ್ಯಗಳ 25 ಜಿಲ್ಲೆಗಳ ಜಿಲ್ಲಾ ಮ್ಯಾಜಿಸ್ಟ್ರೇಟ್ಗಳು ಆಗಮಿಸಲಾಗಿದ್ದಾರೆ ಎಂದರು.
ಬಿಎಡಿಪಿಗೆ 2015-16ನೇ ಸಾಲಿನಲ್ಲಿ ರೂ.990 ಕೋಟಿ ಮಂಜೂರು ಮಾಡಲಾಗಿತ್ತು, ಆದರೆ 2017-18ನೇ ಸಾಲಿನಲ್ಲಿ ರೂ.1,100 ಕೋಟಿ ಮಂಜೂರು ಮಾಡಲಾಗಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.