ನವದೆಹಲಿ: ಕಟ್ಟಾ ಇಸ್ಲಾಮಿಕ್ ಮೂಲಭೂತವಾದಿಗಳಿಂದ ತುಂಬಿ ಹೋಗಿರುವ ಪಾಕಿಸ್ಥಾನದಲ್ಲಿ ಇತರ ಧರ್ಮಿಯರು ಜೀವ ಕೈಯಲ್ಲಿ ಹಿಡಿದುಕೊಂಡು ಬದುಕುವ ಪರಿಸ್ಥಿತಿ ಇದೆ. ಅಲ್ಲಿರುವ ಹಿಂದೂ, ಸಿಖ್, ಕ್ರಿಶ್ಚಿಯನ್ನರು ನಿರಂತರ ಅವಮಾನ, ದೌರ್ಜನ್ಯಗಳನ್ನು ಎದುರಿಸುತ್ತಲೇ ಇದ್ದಾರೆ. ಇದಕ್ಕೆ ಹೊಸ ಉದಾಹರಣೆ ಎಂದರೆ, ಇತ್ತೀಚಿಗಷ್ಟೇ ಅಲ್ಲಿನ ಸಿಖ್ ಧರ್ಮೀಯ ಪೊಲೀಸ್ ಅಧಿಕಾರಿಯೊಬ್ಬರನ್ನು ಅವರ ಮನೆಯಿಂದ ಬಲವಂತವಾಗಿ ಹೊರ ಹಾಕಲಾಗಿದೆ.
ಗುಲಾಬ್ ಸಿಂಗ್ ಶಹೀನ್ ಎಂಬುವವರನ್ನು ಪತ್ನಿ ಮತ್ತು ಮಕ್ಕಳ ಸಮೇತ ಮನೆಯಿಂದ ಹೊರಹಾಕಲಾಗಿದೆ, ಅವರ ಧರ್ಮದ ಬಗ್ಗೆ ಕೆಟ್ಟದಾಗಿ ಮಾತನಾಡಲಾಗಿದೆ. ಪೊಲೀಸ್ ಅಧಿಕಾರಿಯೆಂಬುದನ್ನೂ ನೋಡದೆ ಅವರ ಕುಟುಂಬದ ಮೇಲೆ ದೌರ್ಜನ್ಯ ಎಸಗಲಾಗಿದೆ. ಅವರ ಟರ್ಬನ್ ಕಿತ್ತೊಗೆಯಲಾಗಿದೆ. ಈ ಘಟನೆಯನ್ನು ಭಾರತ ಕಟುವಾಗಿ ಖಂಡಿಸಿದೆ.
‘ಈ ಘಟನೆಯನ್ನು ನಾವು ಕಟುವಾಗಿ ಖಂಡಿಸುತ್ತೇವೆ. ಪಾಕಿಸ್ಥಾನದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ಮೇಲೆ ಇಂತಹ ದೌರ್ಜನ್ಯ ನಡೆಯುತ್ತಿರುವುದು ಇದೇ ಮೊದಲಲ್ಲ’ ಎಂದು ವಿದೇಶಾಂಗ ವಕ್ತಾರ ರವೀಶ್ ಕುಮಾರ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.