ನವದೆಹಲಿ: ಕಿಕೆಟಿಗ ಮೊಹಮ್ಮೊದ್ ಕೈಫ್ ಅವರು ಶುಕ್ರವಾರ ಅಧಿಕೃತವಾಗಿ ಎಲ್ಲಾ ಮಾದರಿಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ.
1997ರಲ್ಲಿ ಕ್ರಿಕೆಟ್ ವೃತ್ತಿ ಜೀವನ ಆರಂಭಿಸಿದ ಕೈಫ್ 2000 ರಿಂದ 2006ರ ವರೆಗೆ 6 ವರ್ಷಗಳಲ್ಲಿ 125 ಅಂತಾರಾಷ್ಟ್ರೀಯ ಏಕದಿನ ಹಾಗೂ 13 ಟೆಸ್ಟ್ ಪಂದ್ಯಾವಳಿಗಳನ್ನು ಆಡಿದ್ದಾರೆ. ಲಾರ್ಡ್ಸ್ನಲ್ಲಿ ನಡೆದ NatWest ಸಿರೀಸ್ನಲ್ಲಿ 325 ರನ್ಗಳ ಮೂಲಕ ಇಂಗ್ಲೆಡ್ನ್ನು ಸೋಲಿಸುವಲ್ಲಿ ಕೈಫ್ ಅತ್ಯಂತ ಮಹತ್ವದ ಪಾತ್ರ ನಿರ್ವಹಿಸಿದ್ದರು. ಇದೀಗ ಆ ಐತಿಹಾಸಿಕ ಗೆಲುವಿಗೆ 16 ವರ್ಷಗಳು ಪೂರೈಸಿರುವ ಸಂದರ್ಭದಲ್ಲಿ ಕೈಫ್ ನಿವೃತ್ತಿಯನ್ನು ಘೋಷಿಸಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಿರುವ ಕೈಫ್, ‘ಐತಿಹಾಸಿಕ NatWest ಟ್ರೋಫಿ ಗೆದ್ದ 16ನೇ ವರ್ಷದಲ್ಲಿ ನಾನು ನಿವೃತ್ತಿಯಾಗುತ್ತಿದ್ದೇನೆ. ಆ ಟೂರ್ನಿಯಲ್ಲಿ ಭಾಗಿಯಾಗಿದ್ದೆ ಎಂಬ ಸಂತೋಷ ನನಗಿದೆ. ಭಾರತ ತಂಡದ ಕ್ಯಾಪ್ ಧರಿಸಿ ನಾನು 125 ಏಕದಿನ ಹಾಗೂ 13 ಟೆಸ್ಟ್ ಪಂದ್ಯಗಳನ್ನು ಆಡಿದ್ದೇನೆ. ಇದು ನನಗೆ ಅತ್ಯಂತ ಹೆಮ್ಮೆಯ ವಿಷಯವಾಗಿದೆ’ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.