ನವದೆಹಲಿ: ಆಯುಷ್ಮಾನ್ ಭಾರತ ಯೋಜನೆಯ ಫಲಾನುಭವಿಗಳಿಗೆ ಆಧಾರ್ ಕಾರ್ಡ್ ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಆಯುಷ್ಮಾನ್ ಭಾರತ ಯೋಜನೆಯಡಿಯ ಸೌಲಭ್ಯಗಳನ್ನು ಪಡೆಯಲು ಆಧಾರ್ ಕಾರ್ಡ್ ಕಡ್ಡಾಯ ಎಂಬ ವರದಿಗಳು ಪ್ರಕಟವಾದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಈ ಸ್ಪಷ್ಟನೆಯನ್ನು ನೀಡಿದೆ.
ಈ ಯೋಜನೆಯ ಫಲಾನುಭವಿಗಳ ಗುರುತು ಧೃಡೀಕರಣಕ್ಕೆ ಆಧಾರ್ ಅವಶ್ಯಕತೆಯಾಗಿದೆ ಆದರೆ ಅದು ಕಡ್ಡಾಯವಲ್ಲ. ಆಧಾರ್ ಇಲ್ಲ ಎಂಬ ಕಾರಣಕ್ಕೆ ಯೋಜನೆಯ ಸೌಲಭ್ಯವನ್ನು ನಿರಾಕರಿಸಲು ಸಾಧ್ಯವಿಲ್ಲ ಎಂದಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಿರುವ ಆರೋಗ್ಯ ಸಚಿವ ಜೆ.ಪಿ ನಡ್ಡಾ, ‘ಆಯುಷ್ಮಾನ್ ಭಾರತ ಯೋಜನೆಯ ಸೇವೆಗಳನ್ನು ಆಧಾರ್ ಇರುವವರಿಗೂ, ಇಲ್ಲದವರಿಗೂ ನೀಡಲು ನಾವು ಬದ್ಧರಾಗಿದ್ದೇವೆ’ ಎಂದು ಹೇಳಿದ್ದಾರೆ. ಅಲ್ಲದೇ ಗುರುತು ಧೃಡೀಕರಣಕ್ಕೆ ಆಧಾರ್ ಕಾರ್ಡ್ ಇಲ್ಲದ ಫಲಾನುಭವಿಗಳು ವೋಟರ್ ಐಡಿ, ರೇಶನ್ ಕಾರ್ಡ್ ಅಥವಾ ಮನರೆಗಾ ಕಾರ್ಡ್ ಇತ್ಯಾದಿ ಗುರುತಿನ ಚೀಟಿಗಳನ್ನು ಒದಗಿಸಿ ಸೌಲಭ್ಯವನ್ನು ಪಡೆದುಕೊಳ್ಳಬಹುದು ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.