ನವದೆಹಲಿ: ದೇಶದ ಸುಮಾರು 2-3 ಕೋಟಿ ಮಕ್ಕಳ ಕ್ರೀಡಾ ಸಾಮರ್ಥ್ಯವನ್ನು ಪರೀಕ್ಷಿಸುವ ಸಲುವಾಗಿ ನೂತನ ಯೋಜನೆಯೊಂದನ್ನು ಅನುಷ್ಠಾನಕ್ಕೆ ತರಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ಯುವಜನ ಮತ್ತು ಕ್ರೀಡಾ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ಅವರು, ‘ದೈಹಿಕ ಸಾಮರ್ಥ್ಯ ಅಳೆಯುವ ಕಾರ್ಯಕ್ರಮದಡಿ ಪ್ರತಿ ವರ್ಷ 1 ಸಾವಿರ ಮಕ್ಕಳನ್ನು ಆಯ್ಕೆ ಮಾಡಲಾಗುತ್ತದೆ. ಈ ಮಕ್ಕಳನ್ನು ಪ್ರಬಲರನ್ನಾಗಿಸಿ ಅವರ ಕ್ರೀಡಾ ಸಾಮರ್ಥ್ಯ, ಪ್ರತಿಭೆಯನ್ನು ಉತ್ತೇಜಿಸಲಾಗುತ್ತದೆ. ಇದಕ್ಕಾಗಿ ವಾರ್ಷಿಕ ಅವರಿಗೆ ರೂ.5 ಲಕ್ಷ ಸ್ಕಾಲರ್ಶಿಪ್ ನೀಡಲಾಗುವುದು’ ಎಂದಿದ್ದಾರೆ.
ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಈ ಮಕ್ಕಳು ಮಹತ್ವದ ಪಾತ್ರವನ್ನು ನಿಭಾಯಿಸುವಂತೆ ನೋಡಿಕೊಳ್ಳಬೇಕಿದೆ ಎಂದು ಪ್ರತಿಪಾದಿಸಿರುವ ಅವರು, ಕ್ರೀಡಾ ಉತ್ತೇಜನಕ್ಕಾಗಿ ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.