ನವದೆಹಲಿ: ದೇಶದಲ್ಲಿ ಡಿಜಿಟಲ್ ಕ್ರಾಂತಿಯಾಗುತ್ತಿದೆ. ಪೇಪರ್ ಬಿಟ್ಟು ಡಿಜಿಟಲ್ನತ್ತ ನಮ್ಮ ದಾಖಲೆಗಳು ಹೊರಳುತ್ತಿವೆ. ಇಂತಹ ಸಂದರ್ಭದಲ್ಲೂ ಕೆಲವೊಂದು ರಾಜ್ಯಗಳ ಸಾರಿಗೆ ಮಂಡಳಿ, ಸಾರಿಗೆ ಪೊಲೀಸರು ಡಿಜಿಟಲ್ ರೂಪದ ಡ್ರೈವಿಂಗ್ ಲೈಸೆನ್ಸ್, ವಾಹನ ನೋಂದಾಣಿ ಸರ್ಟಿಫಿಕೇಟ್ಗಳನ್ನು ಸ್ವೀಕರಿಸಲು ಒಪ್ಪುತ್ತಿಲ್ಲ. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದ್ದು, ಡಿಜಿಟಲ್ ರೂಪದಲ್ಲಿ ಸಾರಿಗೆ ದಾಖಲೆಗಳನ್ನು ಸ್ವೀಕರಿಸುವುದನ್ನು ಕಡ್ಡಾಯಗೊಳಿಸಿದೆ.
ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿಯನ್ನು ತರಲು ಮುಂದಾಗಿರುವ ಕೇಂದ್ರ, ಆ ಮುಖೇನ ಡಿಜಿಟಲ್ ರೂಪದ ಡ್ರೈವಿಂಗ್ ಲೈಸೆನ್ಸ್, ನೋಂದಣಿ ಸರ್ಟಿಫಿಕೇಟ್ಗಳನ್ನು ಸಾರಿಗೆ ಮಂಡಳಿ ಸ್ವೀಕರಿಸುವುದನ್ನು ಕಡ್ಡಾಯಗೊಳಿಸಲಿದೆ.
ಮಾಲಿನ್ಯ ನಿಯಂತ್ರಣ ಸರ್ಟಿಫಿಕೇಟ್, ಇನ್ಸುರೆನ್ಸ್ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿ ಸಲ್ಲಿಕೆ ಮಾಡಬಹುದಾಗಿದೆ. ಈ ಬಗ್ಗೆ ಇನ್ನು ಎರಡು ದಿನಗಳಲ್ಲಿ ಸಾರಿಗೆ ಸಚಿವಾಲಯ ನಿರ್ದೇಶನವನ್ನು ಹೊರಡಿಸುವ ನಿರೀಕ್ಷೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.