ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಬೇಕು ಎನ್ನುವ ಉದ್ದೇಶದೊಂದಿಗೆ ‘ನಮೋ ಭಾರತ್’ ಎಂಬ ನವ ತರುಣರನ್ನೊಳಗೊಂಡ ಸಂಘಟನೆ ಅಣಿಯಾಗಿದೆ.
ಸಮಾನ ಮನಸ್ಕ ಯುವಕರು ‘ನಮೋ ಭಾರತ್’ ಎಂಬ ಸಂಘಟನೆಯ ಹೆಸರಿನಲ್ಲಿ ರಾಜ್ಯಾದ್ಯಂತ ನರೇಂದ್ರ ಮೋದಿಯವರ ಜನಪರ ಮತ್ತು ಅಭಿವೃದ್ಧಿ ಯಜನೆಗಳನ್ನು ಜನರಿಗೆ ಮುಟ್ಟಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುತ್ತಿದ್ದಾರೆ.
ದೇಶದ ಹಿತ ದೃಷ್ಟಿಯಿಂದ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸುವ ಸಾಮಾಜಿಕ ಜವಾಬ್ದಾರಿಯಿಂದ ಈ ಕಾರ್ಯಕ್ಕೆ ಮುಂದಾಗಿದ್ದೇವೆಯೇ ಹೊರತು, ಇದರಲ್ಲಿ ರಾಜಕೀಯ ಇಲ್ಲ ಎಂಬುದು ‘ನಮೋ ಭಾರತ್’ ಸಂಘಟಕರ ಅಂಬೋಣ.
ಸಂಘಟನೆಯ ಗುರಿ:
2019 ರಲ್ಲಿ ನರೇಂದ್ರ ಮೋದಿಯವರನ್ನ ಮತ್ತೊಮ್ಮೆ ಪ್ರಧಾನ ಮಂತ್ರಿಯಾಗಿಸುವಲ್ಲಿ ಬೇಕಾಗುವ ಆಗತ್ಯ ಜವಾಬ್ದಾರಿಗಳನ್ನು ನಿರ್ವಹಿಸುವುದು.
ಕರ್ನಾಟಕದ 2019ರ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ 28ಲೋಕಸಭಾ ಸ್ಥಾನಗಳನ್ನು ಗೆಲ್ಲಿಸಿಕೊಡುವುದರ ಮೂಲಕ “ಮಿಷನ್ 365+” ಯಶಸ್ವಿಯಾಗುವಂತೆ ನೋಡಿಕೊಳ್ಳುವುದು.
ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿನ ದೀರ್ಘಕಾಲೀನ ಕ್ರಾಂತಿಕಾರಿ ಬದಲಾವಣೆಗಳಿಗಾಗಿ ಮೋದಿಯವರ ಬೆಂಬಲಕ್ಕೆ ನಿಲ್ಲುವುದು.
ನರೇಂದ್ರ ಮೋದಿಯವರ ಆಡಳಿತ ಮತ್ತು ಅಭಿವೃದ್ಧಿಯ ಕೆಲಸಗಳ ಮಾಹಿತಿ ವಿನಿಮಯ ಹಾಗೂ ಜನರಲ್ಲಿ ಅರಿವು ಮೂಡಿಸುವುದು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.