ಭೋಪಾಲ್: ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಅವರು, ಮಧ್ಯಪ್ರದೇಶ ಸ್ಟಾರ್ಟ್ಅಪ್ ಯಾತ್ರೆಗೆ ಮಂಗಳವಾರ ಚಾಲನೆ ನೀಡಿದ್ದಾರೆ.
ಯುವ ಮನಸ್ಸುಗಳು ತಮ್ಮ ಸೃಜನಶೀಲತೆ ಮತ್ತು ಆವಿಷ್ಕಾರಗಳನ್ನು ಅನುಷ್ಠಾನಗೊಳಿಸಲು ಉತ್ತೇಜನ ನೀಡುವ ಸಲುವಾಗಿ ಈ ಸ್ಟಾರ್ಟ್ಅಪ್ ಯಾತ್ರೆ ಆರಂಭಗೊಂಡಿದೆ.
ಈ ಕಾರ್ಯಕ್ರಮದಿಂದಾಗಿ ಮುಂದಿನ ದಿನಗಳಲ್ಲಿ ಉದಯೋನ್ಮುಖ ಉದ್ಯಮಿಗಳ ಸಂಖ್ಯೆ ರಾಜ್ಯದಲ್ಲಿ ಹೆಚ್ಚಾಗಲಿದೆ, ರಾಜ್ಯ ಸಮೃದ್ಧಿಯಾಗಲಿದೆ, ಯುವ ಜನರ ಆಶೋತ್ತರ ಈಡೇರಲಿದೆ ಎಂದು ಚೌವ್ಹಾಣ್ ಭರವಸೆ ವ್ಯಕ್ತಪಡಿಸಿದ್ದಾರೆ.
ಹಣದ ಕೊರತೆಯನ್ನು ಅನುಭವಿಸುತ್ತಿರುವ ಎಲ್ಲಾ ಅರ್ಹ ಯುವಕರಿಗೆ ಉದ್ಯಮ ಆರಂಭಿಸಲು ಸರ್ಕಾರ ಹಣಕಾಸಿನ ನೆರವು ನೀಡಲಿದೆ ಎಂದ ಅವರು, ಭೋಪಾಲ್ನಲ್ಲಿನ ಇನ್ಕ್ಯುಬೇಷನ್ ಸೆಂಟರ್ಗೆ ತೆರಳಿ ಯುವಕರು ಹೊಸ ಹೊಸ ಉದ್ಯಮ ಐಡಿಯಾಗಳನ್ನು ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.