ನವದೆಹಲಿ: ಪಾಕಿಸ್ಥಾನ ಮೂಲದ ಜೈಶ್ ಇ ಮೊಹಮ್ಮದ್ ಉಗ್ರ ಸಂಘಟನೆ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭ ರಾಷ್ಟ್ರ ರಾಜಧಾನಿಯಲ್ಲಿ ದುಷ್ಕೃತ್ಯಗಳನ್ನು ಎಸಗಲು ಸಂಚು ರೂಪಿಸಿದೆ ಎಂಬ ಆಘಾತಕಾರಿ ಮಾಹಿತಿಯನ್ನು ಗುಪ್ತಚರ ಇಲಾಖೆ ಬಹಿರಂಗಗೊಳಿಸಿದೆ.
ಈ ಹಿನ್ನಲೆಯಲ್ಲಿ ದೆಹಲಿ ಪೊಲೀಸರು ದೆಹಲಿಯಲ್ಲಿ ಹೈ ಅಲರ್ಟ್ನ್ನು ಘೋಷಿಸಿದ್ದಾರೆ. ಎಲ್ಲಾ ಚಟುವಟಿಕೆಗಳ ಮೇಲೂ ಹದ್ದಿನ ಕಣ್ಣಿಟ್ಟಿದ್ದಾರೆ.
ಇತ್ತೀಚಿಗೆ ಬಂಧಿತರಾದ ಉಗ್ರರಾದ ಸೈಯದ್ ಮುನೀರ್ ಉಲ್ ಹಸನ್, ಆಶಿಕ್ ಬಾಬಾ, ತಾರಿಕ್ ಅಹ್ಮದ್ ದಾರ್ ಜೈಶ್ ಇ ಮೊಹಮ್ಮದ್ ಸಂಘಟನೆಯ ಸಂಚಿನ ಬಗ್ಗೆ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾರೆ ಎನ್ನಲಾಗಿದೆ.
ತರಬೇತಿ ಹೊಂದಿದ ತನ್ನ ಏಜೆಂಟ್ಗಳನ್ನು ಅದು ಭಾರತದೊಳಗೆ ನುಸುಳಿಸಿದೆ, ಕಾಶ್ಮೀರಿ ಯುವಕರನ್ನು ಹೆಚ್ಚಾಗಿ ಈ ಕೃತ್ಯಕ್ಕೆ ಅದು ಬಳಸುತ್ತಿದೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.