ನವದೆಹಲಿ: ಮಹಾರಾಷ್ಟ್ರದಲ್ಲಿ ಅತೀ ಹಿಂದುಳಿದ ಪ್ರದೇಶವಾಗಿರುವ ವಿದರ್ಭ, ಮರಾಠವಾಡ, ಉತ್ತರ ಮಹಾರಾಷ್ಟ್ರ ಭಾಗಗಳಿಗೆ ಅಲ್ಲಿನ ಸರ್ಕಾರ ರೂ.22,122 ಕೋಟಿಗಳ ಪ್ಯಾಕೇಜ್ನ್ನು ಘೋಷಣೆ ಮಾಡಿದೆ.
ಮಳೆಗಾಲದ ಅಧಿವೇಶನದ ಕೊನೆಯ ದಿನವಾದ ಶುಕ್ರವಾರ ವಿಧಾನಸಭೆಯಲ್ಲಿ ಈ ಘೋಷಣೆಯನ್ನು ಸರ್ಕಾರ ಮಾಡಿದೆ.
ನಾಗ್ಪುರದಲ್ಲಿ ಯಾಕೆ ಅಧಿವೇಶನವನ್ನು ನಡೆಸಲಾಯಿತು ಎಂಬುದಕ್ಕೆ ಈ ಪ್ಯಾಕೇಜ್ ಘೋಷಣೆ ಉತ್ತರವಾಗಿದೆ ಎಂದು ಸಿಎಂ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ.
ಸರ್ಕಾರ ರೂ.13,422 ಕೋಟಿಗಳನ್ನು 89 ನೀರಾವರಿ ಯೋಜನೆಗಳಿಗಾಗಿ ವ್ಯಯಿಸಲಿದೆ, ಇದರಿಂದ ಸುಮಾರು 2.56 ಲಕ್ಷ 224 ಎಕರೆ ಪ್ರದೇಶಗಳು ನೀರಾವರಿ ವ್ಯಾಪ್ತಿಗೆ ಒಳಪಡುತ್ತದೆ ಎಂದಿದ್ದಾರೆ.
ಅಲ್ಲದೇ ಯೋಜನೆಗಳನ್ನು ಪರಿಶೀಲನೆ ನಡೆಸುವ ಸಲುವಾಗಿ ಮಂತ್ರಾಲಯದ 7ನೇ ಮಹಡಿಯಲ್ಲಿ ವಾರ್ ರೂಮ್ ರಚನೆ ಮಾಡಲಾಗುತ್ತದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.