News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸೋನಿಯಾ ನೇತೃತ್ವದಲ್ಲಿ ಕಾಂಗ್ರೆಸ್ ಸಿಎಂಗಳ ಸಭೆ

soniaನವದೆಹಲಿ: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಮಂಗಳವಾರ ಬೆಳಿಗ್ಗೆ ದೆಹಲಿಯಲ್ಲಿ ಆರಂಭಗೊಂಡಿದೆ.

ಲೋಕಸಭಾ ಚುನಾವಣೆಯ ಹೀನಾಯ ಸೋಲಿನ ಬಳಿಕ ಸೋನಿಯಾ ನೇತೃತ್ವದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಮುಖ್ಯಮಂತ್ರಿಗಳ ಮೊದಲ ಸಭೆ ಇದಾಗಿದೆ.

ನರೇಂದ್ರ ಮೋದಿ ಸರ್ಕಾರದ ವಿರುದ್ಧ ರಣತಂತ್ರ ರೂಪಿಸುವುದು, ಅದರ ಆರ್ಥಿಕ ಯೋಜನೆಗಳ ವಿರುದ್ಧ, ಭೂಸ್ವಾಧೀನ ಮಸೂದೆಯ ವಿರುದ್ಧ ಜನಾಂದೋಲನ ರೂಪಿಸುವ ಬಗ್ಗೆ ಇಲ್ಲಿ ಚರ್ಚಿತವಾಗಲಿದೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರೂ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top