ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ 5 ದಿನಗಳ ಕಾಲ ಮೂರು ಆಫ್ರಿಕನ್ ರಾಷ್ಟ್ರಗಳ ಪ್ರವಾಸ ಆರಂಭಿಸಲಿದ್ದಾರೆ. ಪ್ರವಾಸದ ಮೊದಲ ಹೆಜ್ಜೆಯಾಗಿ ಅವರು ರುವಾಂಡ ದೇಶಕ್ಕೆ ಪ್ರಯಾಣಿಸಲಿದ್ದಾರೆ. ಈ ಮೂಲಕ ಈ ದೇಶಕ್ಕೆ ಭೇಟಿಕೊಡುತ್ತಿರುವ ಮೊದಲ ಪ್ರಧಾನಿ ಎನಿಸಲಿದ್ದಾರೆ.
ರುವಾಂಡಾಗೆ ಇಂದು ಸಂಜೆ 6 ಗಂಟೆಗೆ ಅವರು ತಲುಪಲಿದ್ದು, ಅಲ್ಲಿ ಸಭೆ ಮತ್ತು ನಿಯೋಗ ಮಟ್ಟದ ಮಾತುಕತೆಯನ್ನು ನಡೆಸಲಿದ್ದಾರೆ. ಅಲ್ಲಿನ ಸರ್ಕಾರದ ‘ಗಿರಿಂಕಾ’ ಯೋಜನೆಗೆ 200 ಹಸುಗಳನ್ನು ಉಡುಗೊರೆಯಾಗಿ ನೀಡಲಿದ್ದಾರೆ.
ಬಳಿಕ ಮೋದಿ ಉಗಾಂಡಾಗೆ ತೆರಳಲಿದ್ದು, ಜುಲೈ 24-25ರವರೆಗೆ ಹಲವಾರು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಕಳೆದ 20 ವರ್ಷಗಳಿಂದ ಈ ರಾಷ್ಟ್ರಕ್ಕೆ ಭೇಟಿ ನೀಡುತ್ತಿರುವ ಮೊದಲ ಪ್ರಧಾನಿ ಮೋದಿಯಾಗಿದ್ದಾರೆ.
ಅಲ್ಲಿಂದ ದಕ್ಷಿಣ ಆಫ್ರಿಕಾಗೆ ತೆರಳಿ ಅವರು ಬ್ರಿಕ್ಸ್ ರಾಷ್ಟ್ರಗಳ ಸಮಿತ್ನಲ್ಲಿ ಭಾಗಿಯಾಗಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.