ಮುಂಬಯಿ: ಪ್ಲಾಸ್ಟಿಕ್ ತ್ಯಾಜ್ಯ ಮತ್ತು ರಬ್ಬರ್ ತ್ಯಾಜ್ಯಗಳನ್ನು ರಸ್ತೆ ನಿರ್ಮಾಣ ಕಾರ್ಯದಲ್ಲಿ ಬಳಕೆ ಮಾಡುವುದಕ್ಕೆ ಉತ್ತೇಜನ ನೀಡುತ್ತಿರುವುದಾಗಿ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಲೋಕಸಭೆಯಲ್ಲಿ ಹೇಳಿದ್ದಾರೆ.
‘ರಬ್ಬರ್, ಪ್ಲಾಸ್ಟಿಕ್ ತ್ಯಾಜ್ಯವನ್ನು ಬಳಕೆ ಮಾಡುವುದರಿಂದ ರಸ್ತೆಗಳ ನಿರ್ಮಾಣ ಕಾರ್ಯದ ವೆಚ್ಚ ತಗ್ಗುತ್ತದೆ ಮತ್ತು ರಸ್ತೆಗಳ ಗುಣಮಟ್ಟವೂ ಉತ್ತಮಗೊಳ್ಳುತ್ತದೆ. ಅಷ್ಟೇ ಅಲ್ಲ ಪ್ಲಾಸ್ಟಿಕ್ ತ್ಯಾಜ್ಯ ಮುಕ್ತಗೊಂಡು ಪರಿಸರ ಸ್ವಚ್ಛವಾಗುತ್ತದೆ’ ಎಂದು ಅವರು ಪ್ರತಿಪಾದಿಸಿದ್ದಾರೆ.
ಜೇಮ್ಶೆಡ್ಪುರದಲ್ಲಿ 50ಕಿಮೀ ಉದ್ದರ ರಸ್ತೆಯನ್ನು ಪ್ಲಾಸ್ಟಿಕ್ ಬಳಕೆ ಮಾಡಿ ನಿರ್ಮಾಣ ಮಾಡಲಾಗಿದೆ, ಇದು ಪ್ರಾಯೋಗಿಕ ಬಳಕೆಯಾಗಿದ್ದು ಮುಂಬರುವ ದಿನಗಳಲ್ಲಿ ರಸ್ತೆ ನಿರ್ಮಾಣದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪ್ಲಾಸ್ಟಿಕ್ ತ್ಯಾಜ್ಯದ ಬಳಕೆಯನ್ನು ಮಾಡಲು ಯೋಜನೆ ರೂಪಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.