ನವದೆಹಲಿ: ರಾಜಸ್ಥಾನದ ಅಲ್ವಾರದಲ್ಲಿ ನಡೆದ ಗುಂಪು ಹಲ್ಲೆ ಪ್ರಕರಣ ಸಂಸತ್ತಿನಲ್ಲಿ ದೊಡ್ಡ ಸದ್ದು ಮಾಡಿದೆ. ಪ್ರತಿಪಕ್ಷಗಳು ಘಟನೆಯನ್ನು ಹಿಡಿದುಕೊಂಡು ಕೇಂದ್ರ ಸರ್ಕಾರದ ವಿರುದ್ಧ ವಾಗ್ ಪ್ರಹಾರ ನಡೆಸುತ್ತಿವೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ರಾಜನಾಥ್ ಸಿಂಗ್ ಅವರು, ಅಗತ್ಯಬಿದ್ದರೆ ಗುಂಪು ಹಲ್ಲೆ ತಡೆಗೆ ಕಾನೂನು ತರುವುದಾಗಿ ಹೇಳಿದ್ದಾರೆ.
1984ರಲ್ಲಿ ನಡೆದ ಸಿಖ್ಖ್ ವಿರೋಧಿ ದಂಗೆಯೇ ದೇಶದ ಅತೀದೊಡ್ಡ ಗುಂಪು ಹಲ್ಲೆ ಪ್ರಕರಣ ಎಂದು ವಿಶ್ಲೇಷಿಸಿದ ಅವರು, ಇತ್ತೀಚಿನ ವರ್ಷಗಳಲ್ಲಿ ಮಾತ್ರವಲ್ಲ ಹಿಂದೆಯೂ ಗುಂಪು ಹಲ್ಲೆ ಘಟನೆಗಳು ಜರುಗಿದೆ ಎಂದಿದ್ದಾರೆ.
ಅಲ್ವಾರ್ ಪ್ರಕರಣದಲ್ಲಿ ಉನ್ನತ ಮಟ್ಟದ ತನಿಖೆಗೆ ಆದೇಶ ನೀಡಲಾಗಿದೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿದ್ಧರಿದ್ದೇವೆ ಎಂದಿದ್ದಾರೆ.
ಸಚಿವರನ್ನೊಳಗೊಂಡ ಉನ್ನತ ಮಟ್ಟದ ಸಮಿತಿ ಗುಂಪು ಹಲ್ಲೆ ತಡೆಗೆ ಬೇಕಾದ ಕ್ರಮಗಳ ಬಗ್ಗೆ ಕೂಲಂಕುಷವಾಗಿ ಪರಿಶೀಲನೆ ನಡೆಸಲಿದೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.