ಬೆಂಗಳೂರು: ಆ್ಯಪಲ್ನ ತೈವಾನ್ ಪೂರೈಕೆದಾರ ವಿಸ್ಟ್ರಾನ್ ಟೆಕ್ನಾಲಜೀಸ್ ಸಂಸ್ಥೆ ಕೋಲಾರ ಜಿಲ್ಲೆಯ ನರಸಪುರ ಕೈಗಾರಿಕ ಪ್ರದೇಶದಲ್ಲಿ ರೂ.3000 ಕೋಟಿ ಹೂಡಿಕೆ ಮಾಡಲು ಯೋಜಿಸಿದೆ.
ವಿಸ್ಟ್ರಾನ್ನ ತಂಡವೊಂದು ಮಂಗಳವಾರ ಮುಖ್ಯಮಂತ್ರಿ ಕುಮಾರಸ್ವಾಮಿ ಅವರೊಂದಿಗೆ ಈ ಬಗ್ಗೆ ಮಾತುಕತೆಯನ್ನು ನಡೆಸಿದ್ದು, ನರಸಪುರದಲ್ಲಿ ಭೂಮಿ ಮಂಜೂರು ಮಾಡುವಂತೆ ಕೋರಿದ್ದಾರೆ.
ಕೋಲಾರದ ಈ ಭಾಗದಲ್ಲಿ ಅದು ಆ್ಯಪಲ್ ಉತ್ಪನ್ನಗಳ ತಯಾರಿಕೆಯ ದೊಡ್ಡ ಘಟಕವನ್ನು ಸ್ಥಾಪನೆ ಮಾಡಲು ನಿರ್ಧರಿಸಿದೆ, ಈ ನಿರ್ಧಾರವನ್ನು ಕುಮಾರಸ್ವಾಮಿ ಬೆಂಬಲಿಸಿದ್ದು, ಭೂಮಿ ಮಂಜೂರು ಮಾಡಲು ಮುಂದಾಗಿದ್ದಾರೆ.
ಈಗಾಗಲೇ ವಿಸ್ಟ್ರಾನ್ ಬೆಂಗಳೂರಿನ ಪೀಣ್ಯದಲ್ಲಿ ಎಸ್ಇ, ಐಫೋನ್ 6ಎಸ್ ತಯಾರಿಕಾ ಘಟಕವನ್ನು ಸ್ಥಾಪಿಸಿದೆ. ನರಸಪುರದಲ್ಲಿ ಎಲ್ಲಾ ಬಗೆಯ ಆಪಲ್ ಉತ್ಪನ್ನಗಳನ್ನು ತಯಾರಿಸಲು ಅದು ನಿರ್ಧರಿಸಿದೆ ಎನ್ನಲಾಗಿದೆ.
ಇನ್ನು 7 ದಿನಗಳೊಳಗೆ ಈ ಒಪ್ಪಂದಕ್ಕೆ ಸಹಿ ಬೀಳುವ ನಿರೀಕ್ಷೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.