ಹೈದರಾಬಾದ್: ತನ್ನ ರಾಜ್ಯವನ್ನು ಹಸಿರಾಗಿಸಲು ಪಣತೊಟ್ಟಿರುವ ತೆಲಂಗಾಣ ಸರ್ಕಾರ, ‘ಹರಿತ ಹರಂ’ ಎಂಬ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯಡಿ ಅದು ಆ.1ರಂದು ಗಜ್ವೆಲ್ ನಗರದ ಸಮೀಪ 1 ಲಕ್ಷ ಗಿಡಗಳನ್ನು ನೆಡಲಿದೆ.
ಅಲ್ಲದೇ ಹೆಚ್ಚುವರಿಯಾಗಿ 20 ಸಾವಿರ ಗಿಡಗಳನ್ನು ಅರಣ್ಯ ಪ್ರದೇಶದಲ್ಲಿ ಅದೇ ದಿನ ನೆಡಲಾಗುವುದು ಎಂದು ಸಿಎಂ ಕೆ.ಚಂದ್ರಶೇಖರ್ ರಾವ್ ಹೇಳಿದ್ದಾರೆ.
ಗಿಡ ನೆಡುವ ಬೃಹತ್ ಕಾರ್ಯದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು, ಪೊಲೀಸರು, ಮಹಿಳೆಯರು, ಯುವಕರು, ವಿದ್ಯಾರ್ಥಿಗಳು, ಉದ್ಯಮಿಗಳು, ಜನಸಾಮಾನ್ಯರು ಭಾಗಿಯಾಗಬೇಕು ಎಂದು ಅವರು ಕರೆ ನೀಡಿದ್ದಾರೆ.
‘ಹರಿತ ಹರಂ’ ಎನ್ನುವುದು ತೆಲಂಗಾಣದ ಗಿಡ ನೆಡುವ ಯೋಜನೆಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.