ಲಕ್ನೋ: ಭೂ ಸಂಬಂಧಿತ ದತ್ತಾಂಶಗಳನ್ನು ಶೇಖರಿಸಿ, ಸಂರಕ್ಷಿಸಲು ಆದಾಯ ಇಲಾಖೆಯಲ್ಲಿ ಬ್ಲಾಕ್ಚೈನ್ ತಂತ್ರಜ್ಞಾನವನ್ನು ಪರಿಚಯಿಸಲು ಉತ್ತರಪ್ರದೇಶ ಸರ್ಕಾರ ನಿರ್ಧರಿಸಿದೆ. ಮುಂದಿನ ಆರು ತಿಂಗಳೊಳಗೆ ಈ ವ್ಯವಸ್ಥೆ ಜಾರಿಗೊಳ್ಳುವ ನಿರೀಕ್ಷೆ ಇದೆ.
ದೇಶದ ಯಾವುದೇ ರಾಜ್ಯದಲ್ಲೂ ಇದುವರೆಗೆ ಈ ತಂತ್ರಜ್ಞಾನವನ್ನು ಅಳವಡಿಸಲಾಗಿಲ್ಲ, ಉತ್ತರ ಪ್ರದೇಶ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದ್ದು, ಇನ್ನು ಆರು ತಿಂಗಳೊಳಗೆ ಬ್ಲಾಕ್ಚೈನ್ ವ್ಯವಸ್ಥೆಯನ್ನು ಜಾರಿಗೊಳಿಸಿದ ದೇಶದ ಮೊದಲ ರಾಜ್ಯ ಎನಿಸಿಕೊಳ್ಳಲಿದೆ.
ಉತ್ತರಪ್ರದೇಶದ 22 ಕೋಟಿ ಜನರ ಪೈಕಿ ಶೇ.67ರಷ್ಟು ಜನ ಗ್ರಾಮೀಣ ಭಾಗದಲ್ಲಿದ್ದು, ತಮ್ಮ ಬದುಕಿಗಾಗಿ ಭೂಮಿಯನ್ನು ಆಶ್ರಯಿಸಿದ್ದಾರೆ. ಹಸ್ತಚಾಲಿತ ಪ್ರಕ್ರಿಯೆಗಳ ಮೂಲಕ ಇದುವರೆಗೆ ಭೂ ಸಂಬಂಧಿತ ದಾಖಲೆಗಳನ್ನು ಇಲಾಖೆ ನಿರ್ವಹಣೆ ಮಾಡುತ್ತದೆ. ಇದರಿಂದ ಭ್ರಷ್ಟಾಚಾರ, ದಾಖಲೆ ತಿರುವುವಿಕೆಗಳಾಗುವ ಸಂಭವವಿದೆ. ಹೀಗಾಗಿ ಬ್ಲಾಕ್ಚೈನ್ ತಂತ್ರಜ್ಞಾನವನ್ನು ಅಳವಡಿಸಲು ನಿರ್ಧರಿಸಲಾಗಿದೆ.
ಬ್ಲಾಕ್ಚೈನ್ ತಂತ್ರಜ್ಞಾನ ವಂಚನೆ, ಭ್ರಷ್ಟಾಚಾರಗಳಿಗೆ ಕಡಿವಾಣ ಹಾಕುವ ನಿರೀಕ್ಷೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.