ಮುಂಬಯಿ; ಮಹಾರಾಷ್ಟ್ರದ ಮದನ್ಪುರದಲ್ಲಿ ಗೋಹತ್ಯೆ ಮಾಡಿದ ಆರೋಪದಡಿ ಮೂವರನ್ನು ಬಂಧಿಸಿ, ಪ್ರಾಣಿ ಸಂರಕ್ಷಣಾ ಕಾಯ್ದೆಯ ಅನ್ವಯ ಪ್ರಕರಣ ದಾಖಲಿಸಲಾಗಿದೆ.
ಬಂಧಿತರನ್ನು ಚಾಂದ್ ಖುರೇಶಿ, ಸುಲ್ತಾನ್ ಖುರೇಶಿ, ಹುಸೇನ್ ಲಾಂಗ್ಡಾ ಎಂದು ಗುರುತಿಸಲಾಗಿದೆ. ಪ್ರಾಣಿಗಳ ಪರವಾದ ಹೋರಾಟ ಚೇತನ್ ಶರ್ಮಾ ಎಂಬುವವರು ನೀಡಿದ ದೂರಿನ ಮೇರೆಗೆ ಖಾಸಯಿ ಖಾನೆಗೆ ದಾಳಿ ನಡೆಸಿ ಪೊಲೀಸರು ಇವರನ್ನು ಬಂಧಿಸಿದ್ದಾರೆ.
ಸ್ಥಳದಿಂದ ಒಂದು ಎತ್ತನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ಮಾರ್ಚ್ನಲ್ಲಿ ಪ್ರಾಣಿ ಸಂರಕ್ಷಣಾ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸಲಾಗಿತ್ತು, ಇದರ ಅನ್ವಯ ಗೋವು, ಎತ್ತು, ಕೋಣಗಳನ್ನು ಕಡಿಯುವುದು ಅಪರಾಧ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.