ನವದೆಹಲಿ: ರಾಷ್ಟ್ರೀಯ ಭದ್ರತೆ ಮತ್ತು ಮಿಲಿಟರಿ ಉದ್ದೇಶಗಳಿಗಾಗಿ ಭಾರತವು ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಬಳಕೆಯ ಬಗ್ಗೆ ಚಿಂತನೆ ನಡೆಸುತ್ತಿದೆ.
ವಿಮಾನಯಾನ, ನೌಕೆ, ಭೂ ವ್ಯವಸ್ಥೆ, ಸೈಬರ್, ಪರಮಾಣು, ಬಯೋಲಾಜಿಕಲ್ ವಾರ್ಫೇರ್ ಮುಂತಾದ ಕಡೆ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನವನ್ನು ಬಳಸುವ ಬಗ್ಗೆ ಸರ್ಕಾರ ಅಧ್ಯಯನ ನಡೆಸುತ್ತಿದೆ.
ಈ ಬಗ್ಗೆ ಲೋಕಸಭೆಗೆ ಮಾಹಿತಿ ನೀಡಿರುವ ರಕ್ಷಣಾ ಖಾತೆ ರಾಜ್ಯ ಸಚಿವ ಸುಭಾಷ್ ಭಮ್ರೆ ಅವರು, ಆರ್ಟಿಫೀಶಿಯಲ್ ಬಳಕೆಗೆ ರಕ್ಷಣಾ ಪಡೆಗಳನ್ನು ಸಿದ್ಧಪಡಿಸುತ್ತಿದ್ದೇವೆ, ಯಂತ್ರ ಅಧ್ಯಯನ ವಲಯದಲ್ಲಿ ಭಾರತದ ಕಲಿಕಾ ಸಾಮರ್ಥ್ಯವನ್ನು ಹೆಚ್ಚಳಮಾಡುತ್ತಿದ್ದೇವೆ ಎಂದಿದ್ದಾರೆ.
ಟಾಟಾ ಸನ್ಸ್ ಮುಖ್ಯಸ್ಥ ನಟರಾಜನ್ ಚಂದ್ರಶೇಖರ್ ಅವರ ನೇತೃತ್ವದಲ್ಲಿ ತಂಡವನ್ನು ರಚಿಸಿ, ರಾಷ್ಟ್ರೀಯ ಭದ್ರತಾ ಕಾರಣಕ್ಕೆ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಬಳಕೆಯ ಬಗ್ಗೆ ರೂಪುರೇಶೆ ಸಿದ್ಧಪಡಿಸಲು ತಿಳಿಸಿದ್ದೇವೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.