ನವದೆಹಲಿ: ಭಿನ್ನಮತದಿಂದಾಗಿ ಎಎಪಿ ಇಬ್ಭಾಗವಾಗುವ ಸ್ಥಿತಿಗೆ ತಲುಪಿದರೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮಾತ್ರ ಶಾಂತ ಚಿತ್ತರಾಗಿಯೇ ಇದ್ದಾರೆ. ನಮ್ಮ ಪಕ್ಷ ಚೆನ್ನಾಗಿಯೇ ಇದೆ ಎಂದು ಹೇಳಿಕೊಳ್ಳುತ್ತಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಚಿಂತೆ ಮಾಡುವ ಅಗತ್ಯವಿಲ್ಲ, ಪಕ್ಷ ಉತ್ತಮವಾಗಿಯೇ ಇದೆ, ಎಲ್ಲವನ್ನೂ ನಾವು ಮ್ಯಾನೇಜ್ ಮಾಡಿಕೊಳ್ಳುತ್ತೇವೆ’ ಎಂದು ಹೇಳಿದ್ದಾರೆ.
ಇನ್ನೊಂದೆಡೆ ಎಎಪಿಯ ಉನ್ನತ ಹುದ್ದೆಯಿಂದ ಉಚ್ಛಾಟನೆಗೊಂಡಿರುವ ಸಂಸ್ಥಾಪಕ ಸದಸ್ಯರಾದ ಯೋಗೇಂದ್ರ ಯಾದವ್ ಮತ್ತು ಪ್ರಶಾಂತ್ ಭೂಷಣ್ ಅವರು ತಮ್ಮ ಬೆಂಬಲಿಗರನ್ನು ಕೂರಿಸಿಕೊಂಡು ಭವಿಷ್ಯದಲ್ಲಿ ಏನು ಮಾಡಬೇಕೆಂದು ಚರ್ಚೆ ನಡೆಸುತ್ತಿದ್ದಾರೆ.
ಒಟ್ಟಿನಲ್ಲಿ ದಿನಕಳೆಯುತ್ತಿದ್ದಂತೆ ಎಎಪಿಯಲ್ಲಿ ಭಿನ್ನಮತೀಯರ ಸಂಖ್ಯೆ ಏರತೊಡಗಿದೆ. ಇದು ಕೇಜ್ರಿವಾಲ್ ಅವರಿಗೆ ದೊಡ್ಡ ಸವಾಲಿನ ಪ್ರಶ್ನೆಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.