ಅಸ್ತಾನ: ಮೂರು ದಿನಗಳ ಮಧ್ಯ ಏಷ್ಯಾ ರಾಷ್ಟ್ರಗಳ ಪ್ರವಾಸದಲ್ಲಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು, ಶುಕ್ರವಾರ ಕಝಕಿಸ್ತಾನದಲ್ಲಿನ ಭಾರತೀಯ ಸಮುದಾಯದೊಂದಿಗೆ ಸಂವಾದ ನಡೆಸಿದರು.
ಮಧ್ಯ ಏಷ್ಯಾದಲ್ಲಿ ಭಾರತದ ಅತೀದೊಡ್ಡ ವ್ಯಾಪಾರ ಮತ್ತು ಬಂಡವಾಳ ಪಾಲುದಾರ ರಾಷ್ಟ್ರ ಎಂದು ಕರೆಯಲ್ಪಡುವ ಕಝಕೀಸ್ತಾನಕ್ಕೆ ಗುರುವಾರ ಬಂದಿಳಿದ ಸುಷ್ಮಾ ಅವರಿಗೆ ಅಲ್ಲಿ ಅಭೂತಪೂರ್ವ ಸ್ವಾಗತವನ್ನು ನೀಡಲಾಗಿದೆ.
ಅಲ್ಲಿನ ರಾಜಧಾನಿ ಅಸ್ತಾನದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಅವರು ಮಾತನಾಡಿದರು, ಅಲ್ಲಿನ ವಿದೇಶಾಂಗ ಸಚಿವರೊಂದಿಗೂ ದ್ವಿಪಕ್ಷೀಯ ಸಭೆ ನಡೆಸಿದರು.
ಕಝಕಿಸ್ತಾನದ ಬಳಿಕ ಅವರು ಕಿರ್ಗೀಸ್ತಾನ ಮತ್ತು ಉಜ್ಬೇಕಿಸ್ತಾನಗಳಿಗೆ ಭೇಟಿ ಕೊಡಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.