ಶ್ರೀನಗರ: ಭಯೋತ್ಪಾದಕರ ವಿರುದ್ಧ ಹೋರಾಡುತ್ತಾ ಪ್ರಾಣಾರ್ಪಣೆ ಮಾಡಿರುವ 499 ವಿಶೇಷ ಪೊಲೀಸ್ ಅಧಿಕಾರಿಗಳ ಕುಟುಂಬಗಳಿಗೆ ಹಣಕಾಸು ನೆರವು ಒದಗಿಸುವ ಸಲುವಾಗಿ ಜಮ್ಮು ಕಾಶ್ಮೀರ ಪೊಲೀಸರು ಟ್ವಿಟರ್ನಲ್ಲಿ ಕ್ರೌಡ್ ಫಂಡಿಂಗ್ ಅಭಿಯಾನ ಆರಂಭಿಸಿದ್ದಾರೆ.
ಜಮ್ಮು ಕಾಶ್ಮೀರ ಪೊಲೀಸ್ ಮಹಾ ನಿರ್ದೇಶಕ ಎಸ್ಪಿ ವೈದ್ ಅವರು ಹ್ಯಾಶ್ಟ್ಯಾಗ್ #martyredSPOs’ನೊಂದಿಗೆ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ.
‘ಈ 499 ಪೊಲೀಸ್ ಅಧಿಕಾರಿಗಳು ಕರ್ತವ್ಯದ ವೇಳೆ ಅತ್ಯುನ್ನತ ತ್ಯಾಗ ಮಾಡಿದ್ದಾರೆ, ಅವರ ಕುಟುಂಬಗಳ ಹೊಣೆ ಹೊತ್ತುಕೊಳ್ಳುವುದು ನಮ್ಮ ಕರ್ತವ್ಯ. ಈ ಹುತಾತ್ಮರಿಗೆ ಮತ್ತು ಅವರ ಕುಟುಂಬಗಳಿಗೆ ಕ್ರೌಡ್ಫಂಡಿಂಗ್ ಮೂಲಕ ಸಣ್ಣ ಕೃತಜ್ಞತೆಯನ್ನು ಅರ್ಪಿಸುವ ಕಾರ್ಯ ಮಾಡುತ್ತಿದ್ದೇವೆ’ ಎಂದು ವೈದ್ ಹೇಳಿದ್ದಾರೆ.
ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆ ಮಾತ್ರವಲ್ಲದೇ ಕಾಶ್ಮೀರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಸಂದರ್ಭದಲ್ಲೂ ಪೊಲೀಸರು ಹತರಾಗಿದ್ದಾರೆ. ಅಂಥವರ ಕುಟುಂಬಗಳಿಗೆ ಆರ್ಥಿಕ ನೆರವು ಒದಗಿಸುವುದು ಈ ಅಭಿಯಾನದ ಆಶಯವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.