ನವದೆಹಲಿ: ಜೂನ್ 21ರ ಅಂತಾರಾಷ್ಟ್ರೀಯ ಯೋಗ ದಿನದಂದು ನವದೆಹಲಿಯ ರಾಜ್ಪಥ್ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಯೋಗ ಮಾಡುತ್ತಿಲ್ಲ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸ್ಪಷ್ಟಪಡಿಸಿದ್ದಾರೆ.
ಈ ಹಿಂದೆ ಅವರು ರಾಜ್ಪಥ್ನಲ್ಲಿ ಯೋಗ ನಡೆಸಲಿದ್ದಾರೆ ಎಂದು ಹೇಳಲಾಗಿತ್ತು, ಆದರೀಗ ಯೋಗ ಮಾಡುವ ಯೋಜನೆಯಿಂದ ಅವರು ಹಿಂದೆ ಸರಿದಿದ್ದಾರೆ. ಆದರೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಮೋದಿ ಯೋಗ ಮಾಡುವ ನಿರ್ಧಾರದಿಂದ ಹಿಂದೆ ಸರಿದಿದ್ದು ಯಾಕೆ ಎಂಬ ಬಗ್ಗೆ ಸುಷ್ಮಾ ಸ್ಪಷ್ಟನೆ ನೀಡಿಲ್ಲ. ಯೋಗ ಸಮಾರಂಭವನ್ನು ಮೋದಿ ಆಕ್ರಮಿಸಿಕೊಳ್ಳುತ್ತಾರೆ ಎಂದು ಟೀಕಾಕಾರರ ಟೀಕೆಗೆ ಗುರಿಯಾಗುವುದನ್ನು ತಪ್ಪಿಸಲು ಮೋದಿ ನಿರ್ಧಾರಕ್ಕೆ ಬಂದಿರುವ ಸಾಧ್ಯತೆ ಇದೆ.
ಯೋಗ ಮಾಡುವುದು ಕಡ್ಡಾಯವೇನಲ್ಲ, ಇದು ಅವರವರ ಇಷ್ಟಕ್ಕೆ ಬಿಟ್ಟ ವಿಚಾರ ಎಂದು ಸುಷ್ಮಾ ಸ್ಪಷ್ಟಪಡಿಸಿದ್ದಾರೆ.
ರಾಜ್ಪಥ್ನಲ್ಲಿ ನಡೆಯಲಿರುವ ಸಮಾರಂಭದಲ್ಲಿ 3,500 ಯೋಗಪಟುಗಳು 30 ನಿಮಿಷಗಳ ಕಾಲ ಯೋಗ ಪ್ರದರ್ಶನ ನಡೆಸಲಿದ್ದಾರೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.