ನವದೆಹಲಿ: ಫೇಕ್ ನ್ಯೂಸ್ಗಳನ್ನು ತಡೆಗಟ್ಟುವ ಸಲುವಾಗಿ ವಾಟ್ಸಾಪ್ ಇಂಡಿಯಾ ಟೀಮ್ನ್ನು ರಚನೆ ಮಾಡಲಿದೆ, ಈ ಬಗ್ಗೆ ಅದು ಸರ್ಕಾರಕ್ಕೆ ಮಾಹಿತಿ ನೀಡಿದೆ ಎನ್ನಲಾಗಿದೆ.
ಭಾರತದ ವಾಟ್ಸಾಪ್ ಮುಖ್ಯಸ್ಥರನ್ನೊಳಗೊಂಡ ತಂಡವನ್ನು ರಚನೆ ಮಾಡಿ ಫೇಕ್ ನ್ಯೂಸ್ಗಳ ವಿರುದ್ಧ ಹೋರಾಟ ನಡೆಸಲು ವಾಟ್ಸಾಪ್ ಮುಂದಾಗಿದೆ. ಇತ್ತೀಚಿನ ದಿನಗಳಲ್ಲಿ ಸುಳ್ಳು ಸುದ್ದಿಗಳ ಹರಡುವಿಕೆಯ ವಿಷಯಕ್ಕೆ ಅದು ತೀವ್ರ ಆಕ್ರೋಶಕ್ಕೆ ಗುರಿಯಾಗಿತ್ತು. ಈ ಬಗ್ಗೆ ಸರ್ಕಾರವೂ ಅದನ್ನು ತರಾಟೆಗೆ ತೆಗೆದುಕೊಂಡು ನೋಟಿಸ್ ಜಾರಿಗೊಳಿಸಿತ್ತು.
ಈ ಹಿನ್ನಲೆಯಲ್ಲಿ ಹಲವಾರು ಸುರಕ್ಷತಾ ಕ್ರಮಗಳನ್ನು ವಾಟ್ಸಾಪ್ ತನ್ನ ಫೀಚರ್ನಲ್ಲಿ ಅಳವಡಿಸಿಕೊಂಡಿದೆ. ಆದರೆ ಜನರ ಪ್ರಮುಖ ಬೇಡಿಕೆಯಾಗಿರುವ ಫೇಕ್ ನ್ಯೂಸ್ಗಳ ಜನಕನನ್ನು ಪತ್ತೆ ಮಾಡುವ ವ್ಯವಸ್ಥೆಯನ್ನು ಇನ್ನೂ ಅದು ಅಭಿವೃದ್ಧಿಪಡಿಸಿಲ್ಲ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.