ಚೆನ್ನೈ: 5 ಬಾರಿ ತಮಿಳುನಾಡಿನ ಸಿಎಂ ಆಗಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದ, ದ್ರಾವಿಡ ಹೋರಾಟದ ಅಪ್ರತಿಮ ನಾಯಕ ಎಂದೇ ಬಣ್ಣಿಸಲ್ಪಡುತ್ತಿದ್ದ ಕರುಣಾನಿಧಿ ಅವರು ಮಂಗಳವಾರ ಸಂಜೆ ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 94 ವರ್ಷದ ಅವರು ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು.
13 ಬಾರಿ ಶಾಸಕರಾಗಿ ತಮಿಳುನಾಡು ವಿಧಾನಸಭೆಗೆ ಆಯ್ಕೆಯಾಗಿದ್ದ ಇವರು, 5 ಬಾರಿ ಸಿಎಂ ಆಗಿದ್ದರು. ಈ ಮೂಲಕ ಸೋಲಿಲ್ಲದ ಸರದಾರ ಎನಿಸಿದ್ದರು. 50 ವರ್ಷ ಡಿಎಂಕೆ ಪಕ್ಷವನ್ನು ಮುನ್ನಡೆಸಿದ ಹೆಗ್ಗಳಿಕೆ ಇವರದ್ದು.
ಇವರ ಸಾವು ತಮಿಳುನಾಡಿನಾದ್ಯಂತದ ಅವರ ಅಭಿಮಾನಿಗಳನ್ನು ಶೋಕಸಾಗರದಲ್ಲಿ ಮುಳುಗುವಂತೆ ಮಾಡಿದೆ. ಪ್ರಸ್ತುತ ಅವರ ದೇಹವನ್ನು ರಾಜಾಜಿಹಾಲ್ನಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದೆ. ಅಂತ್ಯ ಸಂಸ್ಕಾರ ಎಲ್ಲಿ ನಡೆಯುತ್ತದೆ ಎಂಬ ಗೊಂದಲ ಇನ್ನೂ ನಿವಾರಣೆಯಾಗಿಲ್ಲ.
ಕರುಣಾನಿಧಿ ಮರಣದ ಹಿನ್ನಲೆಯಲ್ಲಿ ತಮಿಳುನಾಡಿನಲ್ಲಿ 7 ದಿನಗಳ ಕಾಲ ಶೋಕಾಚರಣೆಯನ್ನು ಘೋಷಿಸಲಾಗಿದೆ. ಇವರ ಸ್ಮಾರಕ ನಿರ್ಮಾಣ ಮಾಡಲು 2 ಎಕರೆ ಭೂಮಿಯನ್ನೂ ನೀಡುವುದಾಗಿ ತಮಿಳುನಾಡು ಸರ್ಕಾರ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.