ನವದೆಹಲಿ: ನೋಟ್ ಬ್ಯಾನ್ ಆದ ಬಳಿಕ ದೇಶದಾದ್ಯಂತದಿಂದ ಒಟ್ಟು 13.8 ಕೋಟಿ ರೂಪಾಯಿ ಮೌಲ್ಯದ ನಕಲಿ ನೋಟುಗಳನ್ನು ವಶಕ್ಕೆ ಪಡೆಯಲಾಗಿದೆ. ಇದರಲ್ಲಿ ಅತ್ಯಧಿಕ ಪ್ರಮಾಣದ ರೂ.5.94 ಕೋಟಿ ನಕಲಿ ನೋಟುಗಳನ್ನು ಗುಜರಾತ್ ರಾಜ್ಯದಿಂದ ವಶಕ್ಕೆ ಪಡೆಯಲಾಗಿದೆ ಎಂದು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಾಹಿತಿ ನೀಡಿದೆ.
ಕೇಂದ್ರ ಗೃಹಖಾತೆ ರಾಜ್ಯಸಚಿವ ಹಂಸರಾಜ್ ಗಂಗಾರಾಮ್ ಅಹಿರ್ ಅವರು ಲೋಕಸಭೆಯಲ್ಲಿ ಮಾಹಿತಿಯನ್ನು ನೀಡಿದ್ದು, ನ್ಯಾಷನಲ್ ಕ್ರೈಮ್ ರಿಕಾರ್ಡ್ಸ್ ಬ್ಯುರೋದ ವರದಿಯಂತೆ 13.8 ಮೌಲ್ಯದ ನಕಲಿ ನೋಟುಗಳನ್ನು 2016ರ ನ.9ರಿಂದ 2018ರ ಜೂನ್ 30ರವರೆಗೆ ವಶಕ್ಕೆ ಪಡೆಯಲಾಗಿದೆ ಎಂದಿದ್ದಾರೆ.
ನೇಪಾಳ, ಪಾಕಿಸ್ಥಾನ ಮತ್ತು ಬಾಂಗ್ಲಾ ಗಡಿಯಲ್ಲಿನ ರಾಜ್ಯಗಳಲ್ಲಿ ಹೆಚ್ಚಿನ ಪ್ರಮಾಣದ ನಕಲಿ ನೋಟುಗಳು ಪತ್ತೆಯಾಗಿವೆ ಎಂದಿದ್ದಾರೆ.
ಉತ್ತರಪ್ರದೇಶದಿಂದ ರೂ.2.19 ಕೋಟಿ, ಪಶ್ಚಿಮಬಂಗಾಳದಿಂದ ರೂ.2 ಕೋಟಿ, ಮಿಜೋರಾಂನಿಂದ ರೂ.1 ಕೋಟಿ, ಇತರ ಕಡೆಗಳಿಂದ ರೂ.1ಕೋಟಿ ನಕಲಿ ನೋಟುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.