ನವದೆಹಲಿ : ಭಾರತೀಯ ರಿಸರ್ವ್ ಬ್ಯಾಂಕ್ 2018 ನೇ ಸಾಲಿನಲ್ಲಿ ಕೇಂದ್ರ ಸರ್ಕಾರಕ್ಕೆ ಕಳೆದ ಬಾರಿಗಿಂತಲೂ ಹೆಚ್ಚಿನ ಲಾಭಾಂಶದ ಮೊತ್ತವನ್ನು ನೀಡಲಿದೆ. ಈ ಬಾರಿ ಇದರ ಮೊತ್ತ 50 ಸಾವಿರ ಕೋಟಿ ರೂ. ಆಗಿರಲಿದೆ.
ಆಗಸ್ಟ್ 8 ರಂದು ನಡೆದ ಆಡಳಿತ ಮಂಡಳಿಯ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದ್ದು ಪ್ರಸಕ್ತ ವರ್ಷದ ಜೂನ್ 30 ರಂದು ಕೊನೆಯಾದ ಆರ್ಥಿಕ ವರ್ಷದಲ್ಲಿ 50 ಸಾವಿರ ಕೋಟಿ ರೂ. ಲಾಭಾಂಶವನ್ನು ಕೇಂದ್ರ ಸರ್ಕಾರಕ್ಕೆ ಭಾರತೀಯ ರಿಸರ್ವ್ ಬ್ಯಾಂಕ್ ನೀಡಲಿದೆ. ಕಳೆದ ಬಾರಿಗಿಂತ ಈ ಬಾರಿ ಶೇ. 63% ರಷ್ಟು ಹೆಚ್ಚಿನ ಹಣವನ್ನು ಭಾರತೀಯ ರಿಸರ್ವ್ ಬ್ಯಾಂಕ್ ಕೇಂದ್ರ ಸರ್ಕಾರಕ್ಕೆ ನೀಡಲು ಮುಂದಾಗಿದೆ.
2017 ರಲ್ಲಿ ಆರ್ಬಿಐ 30,659 ಕೋಟಿ ರೂ. ಲಾಭಾಂಶವನ್ನು ಕೇಂದ್ರ ಸರ್ಕಾರಕ್ಕೆ ನೀಡಿತ್ತು. ಈ ಬಾರಿ 50 ಸಾವಿರ ಕೋಟಿ ರೂ. ಲಾಭಾಂಶವನ್ನು ಕೇಂದ್ರ ಸರ್ಕಾರಕ್ಕೆ ನೀಡಲು ಆರ್ಬಿಐ ನಿರ್ಧರಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.