ನವದೆಹಲಿ: ಆನ್ಲೈನ್ ಮೂಲಕ ತಾವು ಬೆಳೆದ ಬೆಳೆಗಳನ್ನು ಅತ್ಯುತ್ತಮ ಬೆಲೆಗೆ ಮಾರಾಟ ಮಾಡಲು ಅನುವು ಮಾಡಿಕೊಡುವ ಇ-ನಾಮ್ ಪ್ಲಾಟ್ಫಾರ್ಮ್ಗೆ ದೇಶದ ಸುಮಾರು 1.11 ಕೋಟಿ ರೈತರು ನೋಂದಾವಣೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಕೃಷಿ ಸಚಿವ ರಾಧ ಮೋಹನ್ ಸಿಂಗ್ ಅವರು ಲೋಕಸಭೆಗೆ ಮಾಹಿತಿಯನ್ನು ನೀಡಿದ್ದು, 16 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 1.11 ಕೋಟಿ ರೈತರು ತಮ್ಮ ಬೆಲೆಗಳನ್ನು ಆನ್ಲೈನ್ ಮೂಲಕ ಮಾರಾಟ ಮಾಡಲು ಇ-ನಾಮ್ಗೆ ನೋಂದಾಯಿಸಿಕೊಂಡಿದ್ದಾರೆ ಎಂದಿದ್ದಾರೆ.
ಇ-ನಾಮ್ ಪೋರ್ಟಲ್ಗೆ ಹೋಗಿ ಅಲ್ಲಿ ರೈತರು ತಮ್ಮ ಹೆಸರನ್ನು ನೋಂದಾವಣೆ ಮಾಡಿಕೊಳ್ಳಬೇಕು ಮತ್ತು ಇ-ನಾಮ್ ವೇದಿಕೆಯಲ್ಲಿ ಯಾವುದೇ ಇ-ನಾಮ್ ಮಂಡಿಗೆ ತಮ್ಮ ಬೆಳೆಗಳನ್ನು ಅವರು ಮಾರಾಟ ಮಾಡಬಹುದು ಎಂದಿದ್ದಾರೆ.
ಇ-ನಾಮ್ ರೈತರಿಗೆ ಉತ್ತಮ ಮಾರುಕಟ್ಟೆ ಸೌಲಭ್ಯವನ್ನು ಒದಗಿಸಿದೆ, ಸ್ಪರ್ಧಾತ್ಮಕ ಮತ್ತು ಪಾರದರ್ಶಕ ದರಗಳ ವ್ಯವಸ್ಥೆ ಇಲ್ಲಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.