ಬೆಂಗಳೂರು: ಭಾರೀ ತೂಕದ ಬ್ಯಾಗ್ ಹೊತ್ತುಕೊಂಡು, ಬಾಗಿಕೊಂಡು ಶಾಲೆಗೆ ತೆರಳುವ ಮಕ್ಕಳನ್ನು ನಾವು ನೋಡಿದ್ದೇವೆ. ಮಕ್ಕಳ ಸಾಮರ್ಥ್ಯಕ್ಕಿಂತ ಹೆಚ್ಚು ತೂಕದ ಬ್ಯಾಗ್ಗಳನ್ನು ಹೊತ್ತುಕೊಳ್ಳುವುದು ಅವರಿಗೆ ಅನಿವಾರ್ಯವಾಗಿಬಿಟ್ಟಿದೆ. ಮಕ್ಕಳ ಬ್ಯಾಗ್ ತೂಕವನ್ನು ಕಡಿಮೆ ಮಾಡಬೇಕು ಎಂಬ ಒತ್ತಾಯ ಕೇಳುತ್ತಲೇ ಬರುತ್ತಿದೆ. ಈ ನಿಟ್ಟಿನಲ್ಲಿ ಎಚ್ಚೆತ್ತುಕೊಂಡಿರುವ ಸರ್ಕಾರ ತಿಂಗಳಿಗೆ ಎರಡು ದಿನ ಬ್ಯಾಗ್ನಿಂದ ಮಕ್ಕಳಿಗೆ ಮುಕ್ತಿ ನೀಡಲು ನಿರ್ಧರಿಸಿದೆ.
ತಿಂಗಳ ಎರಡು ಶನಿವಾರಗಳಂದು ಮಕ್ಕಳು ಬ್ಯಾಗ್ ಇಲ್ಲದೆ ಶಾಲೆಗೆ ತೆರಳುವ ಅವಕಾಶವನ್ನು ಕಲ್ಪಿಸಿಕೊಡಲಾಗುತ್ತಿದೆ. ಈ ದಿನ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ, ಆಟೋಟ ಕಾರ್ಯಗಳಲ್ಲಿ ಭಾಗಿಯಾಗುವಂತೆ ನೋಡಿಕೊಳ್ಳಲಾಗುತ್ತದೆ.
ಬ್ಯಾಗ್ ರಹಿತ ದಿನ ಮಕ್ಕಳಿಗೆ ಸಂಭ್ರಮವನ್ನು ನೀಡಬೇಕು, ಶಾಲೆಯತ್ತ ಅವರು ಹೆಚ್ಚು ಆಕರ್ಷಿತರಾಗುವಂತೆ ಮಾಡಬೇಕು ಎಂಬುದು ಈ ದಿನದ ಆಶಯವಾಗಬೇಕು ಎಂದು ಶಿಕ್ಷಣ ಇಲಾಖೆ ಶಾಲೆಗಳಿಗೆ ಸೂಚಿಸಿದೆ.
ಈಗಾಗಲೇ ಮುಂದಿನ ಶೈಕ್ಷಣಿಕ ವರ್ಷದಿಂದ ಸಿಲೆಬಸ್ಗಳನ್ನು ಅರ್ಧದಷ್ಟು ಕಡಿತಗೊಳಿಸಲು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವ್ಡೇಕರ್ ಎನ್ಸಿಆರ್ಟಿಗೆ ನಿರ್ದೇಶನ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.