ನವದೆಹಲಿ: ಭಾರೀ ಮಳೆಗೆ ಕೇರಳ ತತ್ತರಿಸಿದ್ದು, ಅಲ್ಲಲ್ಲಿ ನೆರೆ ಕಾಣಿಸಿಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅಲ್ಲಿನ ಸಿಎಂ ಪಿನರಾಯಿ ವಿಜಯನ್ ಅವರಿಗೆ ಕರೆ ಮಾಡಿ, ಪರಿಸ್ಥಿತಿಯ ಬಗ್ಗೆ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಕೇಂದ್ರದ ವತಿಯಿಂದ ಬೇಕಾದ ಎಲ್ಲಾ ನರೆವು ನೀಡುವ ಭರವಸೆಯನ್ನು ನೀಡಿದ್ದಾರೆ.
ಈ ಬಗ್ಗೆ ಟ್ವಿಟ್ ಮಾಡಿರುವ ಮೋದಿ, ‘ಕೇರಳ ಸಿಎಂ ಪಿನರಾಯಿ ವಿಜಯನ್ ಅವರೊಂದಿಗೆ ಮಾತುಕತೆ ನಡೆಸಿ, ಅವರ ರಾಜ್ಯದ ವಿವಿಧ ಭಾಗಗಳಲ್ಲಿ ಕಾಣಿಸಿಕೊಂಡಿರುವ ನೆರೆಯ ಬಗ್ಗೆ ಚರ್ಚೆ ನಡೆಸಿದ್ದೇನೆ. ಬಾಧಿತರಾದವರಿಗೆ ಬೇಕಾದ ಎಲ್ಲಾ ನೆರವನ್ನು ಒದಗಿಸುತ್ತೇವೆ. ಇಂತಹ ಕಠಿಣ ಪರಿಸ್ಥಿತಿಯಲ್ಲಿ ಕೇರಳ ಜನತೆಯ ಹೆಗಲಿಗೆ ಹೆಗಲು ಕೊಟ್ಟು ನಿಲ್ಲುತ್ತೇವೆ’ ಎಂದಿದ್ದಾರೆ.
ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮವಾಗಿ ಉದ್ಭವವಾಗಿರುವ ನೆರೆಗೆ ಕೇರಳದಲ್ಲಿ ಕನಿಷ್ಠ 24 ಮಂದಿ ಮೃತರಾಗಿದ್ದಾರೆ ಎಂದು ಗೃಹ ಇಲಾಖೆ ಹೇಳಿದೆ.
ಸೇನಾಪಡೆ, ವಾಯುಪಡೆ ಮತ್ತು ನೌಕಾಪಡೆ ಕೇರಳಕ್ಕೆ ರಕ್ಷಣಾ ಕಾರ್ಯಾಚರಣೆಗೆ ಆಗಮಿಸಲಿದೆ ಎಂದು ಕೇಂದ್ರ ಸಚಿವ ಕೆಜೆ ಅಲ್ಫೋನ್ಸ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.