ಜೋಧ್ಪುರ್: ಅಪರಾಧಗಳನ್ನು ಮಾಡಿ ಜೈಲು ಸೇರಿರುವ ಕ್ರಿಮಿನಲ್ಗಳು ಜೈಲಿನಲ್ಲಿ ಶಿಕ್ಷೆ ಅನುಭವಿಸುವ ಬದಲು ಫೇಸ್ಬುಕ್ಗೆ ಫೋಟೋ, ಸೆಲ್ಫಿಗಳನ್ನು ಹಾಕಿ ಜೀವನವನ್ನು ಆನಂದದಿಂದ ಕಳೆಯುತ್ತಿದ್ದಾರೆ.
ರಾಜಸ್ಥಾನ ಜೋಧ್ಪುರ ಜೈಲಿನಲ್ಲಿನ ಕೈದಿಗಳು ಫೇಸ್ಬುಕ್ಗೆ ಜೈಲಿನಲ್ಲಿ ಕುಳಿತುಕೊಂಡು ಪೋಸ್ಟ್ಗಳನ್ನು ಹಾಕುತ್ತಿದ್ದಾರೆ ಎಂಬ ಆಘಾತಕಾರಿ ಸುದ್ದಿ ಬಯಲಾಗಿದೆ.
ಮೊಬೈಲ್ಗಳನ್ನು ಹೊಂದಿರುವ ಕೈದಿಗಳು ಅದರ ಮೂಲಕ ಹೊರ ಜಗತ್ತಿನ ಸಂಪರ್ಕವನ್ನು ಇಟ್ಟುಕೊಂಡಿದ್ದಾರೆ. ಅದರ ಮೂಲಕವೇ ಸಾಮಾಜಿಕ ಜಾಲತಾಣಗಳನ್ನು ಜಾಲಾಡುತ್ತಿದ್ದಾರೆ. ಇದು ನಮ್ಮ ವ್ಯವಸ್ಥೆ ಎಷ್ಟರ ಮಟ್ಟಿಗೆ ಕೆಟ್ಟು ಹೋಗಿದೆ ಎಂಬುದಕ್ಕೆ ಸಾಕ್ಷಿಯಾಗಿದೆ.
ಘಟನೆ ಬೆಳಕಿಗೆ ಬಂದ ಬಳಿಕ ಎಚ್ಚೆತ್ತುಕೊಂಡಿರುವ ಜೈಲಿನ ಅಧಿಕಾರಿಗಳು, ಫೋನ್ ಜಮ್ಮರ್ಗಳನ್ನು ಜೈಲಿನೊಳಗೆ ಅಳವಡಿಸಲು ಮುಂದಾಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.