ನವದೆಹಲಿ: ರಾಜ್ಯಸಭಾ ಉಪಸಭಾಪತಿ ಚುನಾವಣೆಯಲ್ಲಿ ಬಿಜೆಡಿ ಮತ್ತು ಟಿಆರ್ಎಸ್ ಪಕ್ಷಗಳು ಎನ್ಡಿಎ ಅಭ್ಯರ್ಥಿಯನ್ನು ಬೆಂಬಲಿಸಿದ್ದು ಪ್ರತಿಪಕ್ಷಗಳಿಗೆ ದೊಡ್ಡ ಹೊಡೆತವನ್ನೇ ನೀಡಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ದೊಡ್ಡ ಮಟ್ಟದ ಒಗ್ಗಟ್ಟನ್ನು ಪ್ರದರ್ಶಿಸುವ ಅವುಗಳ ಪ್ರಯತ್ನಕ್ಕೆ ಇದು ಹಿನ್ನಡೆಯನ್ನು ತಂದುಕೊಟ್ಟಿದೆ.
ಬಿಜೆಡಿ ಮತ್ತು ಟಿಆರ್ಎಸ್ನಿಂದ ಸಿಕ್ಕ ಬೆಂಬಲ ಲೋಕಸಬಾ ಚುನಾವಣೆಗೆ ಸಿದ್ಧವಾಗುತ್ತಿರುವ ಬಿಜೆಪಿಗೆ ತುಸು ನಿರಾಳತೆ ತಂದುಕೊಟ್ಟಿದೆ, ಕಾಂಗ್ರೆಸ್ಗೆ ಆತಂಕವನ್ನು ತಂದಿತ್ತಿದೆ.
ಒರಿಸ್ಸಾದಲ್ಲಿ ಬಿಜೆಡಿ ಮುಖ್ಯಸ್ಥ, ಸಿಎಂ ಅವರಿಗೆ ಬಿಜೆಪಿಯೇ ದೊಡ್ಡ ಸವಾಲಾಗಿ ಪರಿಣಮಿಸಿದೆ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅವರಿಗೆ ದೊಡ್ಡ ಪ್ರತಿಸ್ಪರ್ಧಿಯಾಗುವ ನಿರೀಕ್ಷೆ ಇದೆ. ಇನ್ನೊಂದೆಡೆ ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್ ಅವರೂ ಬಿಜೆಪಿಯ ವಿರುದ್ಧ ಎಲ್ಲಾ ಪ್ರಾದೇಶಿಕ ಪಕ್ಷಗಳನ್ನು ಒಗ್ಗೂಡಿಸುವ ಮಾತನ್ನು ಹಲವು ಬಾರಿ ಆಡಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜ್ಯಸಭೆಯಲ್ಲಿ ಬಿಜೆಪಿಗೆ ಈ ಪಕ್ಷಗಳ ಬೆಂಬಲ ಸಿಕ್ಕಿರುವುದು ಬಿಜೆಪಿ ಪಾಲಿಗೆ ಸಕಾರಾತ್ಮಕ ಬೆಳವಣಿಗೆಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.