ನವದೆಹಲಿ: ಪಾಕಿಸ್ಥಾನ ಆಕ್ರಮಿತ ಕಾಶ್ಮೀರದಲ್ಲಿ ನಡೆಸುತ್ತಿರುವ ನಿರ್ಮಾಣ ಕಾರ್ಯವನ್ನು ಸ್ಥಗಿತಗೊಳಿಸುವಂತೆ ಭಾರತ ಚೀನಾ ಆಡಳಿತಕ್ಕೆ ತಿಳಿಸಿದೆ ಎಂಬುದಾಗಿ ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಾಹಿತಿ ನೀಡಿದೆ.
ವಿದೇಶಾಂಗ ರಾಜ್ಯ ಖಾತೆ ಸಚಿವ ವಿಕೆ ಸಿಂಗ್ ಅವರು ಈ ಬಗ್ಗೆ ರಾಜ್ಯಸಭೆಗೆ ಲಿಖಿತ ಉತ್ತರವನ್ನು ನೀಡಿದ್ದು, ಇಡೀ ಜಮ್ಮು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎಂಬುದರ ಬಗ್ಗೆ ಭಾರತ ಸ್ಪಷ್ಟ ನಿಲುವನ್ನು ಹೊಂದಿದೆ ಎಂದಿದ್ದಾರೆ.
ಭಾರತದ ರಾಜ್ಯವಾದ ಜಮ್ಮು ಕಾಶ್ಮೀರದ ಒಂದು ಭಾಗವನ್ನು ಪಾಕಿಸ್ಥಾನ ಬಲವಂತವಾಗಿ ಆಕ್ರಮಿಸಿಕೊಂಡಿದೆ ಎಂದಿದ್ದಾರೆ.
‘ಪಿಒಕೆಯಲ್ಲಿ ಚೀನಾ ನಿರ್ಮಾಣ ಮಾಡುತ್ತಿರುವ ಬಗ್ಗೆ ಸರ್ಕಾರಕ್ಕೆ ಅರಿವಿದೆ, ನಮ್ಮ ಸಾರ್ವಭೌಮತೆಗೆ ಧಕ್ಕೆ ತರುವಂತಹ ಚಟುವಟಿಕೆಗಳನ್ನು ಅಲ್ಲಿ ನಡೆಸಲಾಗುತ್ತಿದೆ, ಈ ಬಗ್ಗೆ ಚೀನಾಗೆ ಭಾರತ ಉನ್ನತ ಮಟ್ಟದಲ್ಲೇ ತನ್ನ ಕಳವಳವನ್ನು ವ್ಯಕ್ತಪಡಿಸಿದೆ. ನಿರ್ಮಾಣ ಕಾರ್ಯ ಸ್ಥಗಿತಗೊಳಿಸುವಂತೆ ತಿಳಿಸಿದೆ’ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.