ನವದೆಹಲಿ: ಎಲ್ಲಾ ಶಾಲೆಗಳು 6ನೇ ತರಗತಿಯಿಂದ ವಿದ್ಯಾರ್ಥಿಗಳಿಗೆ ಯೋಗಾಭ್ಯಾಸ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು ಎಂದು ರಾಷ್ಟ್ರೀಯ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಎನ್ಸಿಇಆರ್ಟಿ) ನಿರ್ದೇಶನ ನೀಡಿದೆ.
ಯೋಗದ ಆಸನಗಳು, ಪ್ರಾಣಾಯಾಮ, ಧ್ಯಾನದ ಪ್ರಾಯೋಗಿಕ ಮತ್ತು ಥಿಯರಿಗಳನ್ನು 6ನೇ ತರಗತಿಯ ಬಳಿಕದ ವಿದ್ಯಾರ್ಥಿಗಳಿಗೆ ಕಲಿಸಿಕೊಡಬೇಕು ಎಂದು ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಶಾಲೆಗಳಿಗೆ ಸೂಚನೆಯನ್ನು ನೀಡಲಾಗಿದೆ. ಇದಕ್ಕೆ ಸಂಬಂಧಿಸಿದ ಪಠ್ಯವನ್ನು ಅದು ಕಳುಹಿಸಿಕೊಡಲಿದೆ.
1ರಿಂದ 10ನೇ ತರಗತಿಯವರೆಗೆ ಕ್ರೀಡೆ, ದೈಹಿಕ ಶಿಕ್ಷಣವನ್ನೂ ಇದು ಕಡ್ಡಾಯಗೊಳಿಸಿದ್ದು, ಪ್ರಾಥಮಿಕ ತರಗತಿಗಳಲ್ಲಿರುವ ಮಕ್ಕಳೂ ಯೋಗಾಭ್ಯಾಸ ಮಾಡಬಹುದಾಗಿದೆ ಎಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.