ವಾಘಾ: ನೆರೆಯ ಪಾಕಿಸ್ಥಾನ ತನ್ನ 72ನೇ ಸ್ವಾತಂತ್ರ್ಯ ದಿನವನ್ನು ಇಂದು ಆಚರಿಸಿಕೊಳ್ಳುತ್ತಿದ್ದು, ಈ ಹಿನ್ನಲೆಯಲ್ಲಿ ಪಂಜಾಬ್ನ ವಾಘಾ-ಅಟ್ಟಾರಿ ಗಡಿಯಲ್ಲಿ ಭಾರತ-ಪಾಕ್ ಯೋಧರು ಪರಸ್ಪರ ಸಿಹಿಯನ್ನು ವಿನಿಮಯ ಮಾಡಿಕೊಂಡರು.
ಪ್ರತಿ ವರ್ಷ ಸ್ವಾತಂತ್ರ್ಯ ದಿನಾಚರಣೆ ಸೇರಿದಂತೆ ಇತರ ಶುಭ ಸಂದರ್ಭಗಳಲ್ಲಿ ವಾಘಾ-ಅಟ್ಟಾರಿ ಗಡಿಗಳಲ್ಲಿ ಸಿಹಿ ತಿಂಡಿಯನ್ನು ವಿನಿಮಯ ಮಾಡಿಕೊಳ್ಳುವುದು ರೂಢಿ. ಈ ಬಾರಿಯೂ ಪದ್ಧತಿಯನ್ನು ಪಾಲನೆ ಮಾಡಲಾಗಿದೆ.
ಭಾರತಕ್ಕಿಂತ ಒಂದು ದಿನ ಮುಂಚಿತವಾಗಿ ಅಂದರೆ ಆ.14ರಂದು ಪಾಕಿಸ್ಥಾನ ತನ್ನ ಸ್ವಾತಂತ್ರ್ಯ ದಿನವನ್ನು ಆಚರಿಸಿಕೊಳ್ಳುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.