ಮಡಿಕೇರಿ: ಮಳೆರಾಯನ ಆರ್ಭಟಕ್ಕೆ ಕೊಡಗು ತತ್ತರಿಸಿದೆ. ಬೆಟ್ಟಗಳು ಕುಸಿಯಲಾರಂಭಿಸಿದ್ದು, ಜನರು ಅಪಾಯದಲ್ಲಿ ಸಿಲುಕಿದ್ದಾರೆ. ಈಗಾಗಲೇ ನೂರಾರು ಮನೆಗಳು ಕುಸಿದು ಬಿದ್ದಿದ್ದು, ಜನರು ಬೀದಿಪಾಲಾಗಿದ್ದಾರೆ.
ನಿರಾಶ್ರಿತರಿಗಾಗಿ ಗಂಜಿಕೇಂದ್ರಗಳನ್ನು ತೆರೆಯಲಾಗಿದ್ದು, ಬೆಟ್ಟಗಳನ್ನು ಹತ್ತಿಕೊಂಡು ಜನರ ಇದರತ್ತ ಬರುತ್ತಿದ್ದಾರೆ. ಯೋಧರು, ಅಗ್ನಿ ಶಾಮಕ ಸಿಬ್ಬಂದಿ, ಎನ್ಡಿಆರ್ಎಫ್ ಸಿಬ್ಬಂದಿಗಳು ಜನರ ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ವಿಪರೀತ ಮಳೆಯಿಂದಾಗಿ ರಕ್ಷಣಾ ಕಾರ್ಯವೂ ವಿಳಂಬವಾಗುತ್ತಿದೆ.
ಮಕ್ಕಂದೂರು ಸಮೀಪದ ಬೆಟ್ಟಗಳಲ್ಲಿ ಸುಮಾರು 600 ಮಂದಿ ಸಿಲುಕಿ ಹಾಕಿಕೊಂಡಿದ್ದಾರೆ ಎನ್ನಲಾಗಿದ್ದು, ಹೆಲಿಕಾಫ್ಟರ್ ಮೂಲಕ ಅವರ ರಕ್ಷಣಾ ಕಾರ್ಯವನ್ನು ಮಾಡಲಾಗುತ್ತಿದೆ.
ಮಣ್ಣು ಕುಸಿದು, ನೀರು ತುಂಬಿ ರಸ್ತೆಗಳು ಬಂದ್ ಆಗಿರುವುದರಿಂದ ನಿರಾಶ್ರಿತರಿಗೆ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡುವುದು ಕೂಡ ಕಷ್ಟವಾಗುತ್ತಿದೆ.
ಎಡೆಬಿಡದೆ ಸುರಿಯುತ್ತಿರುವ ಮಳೆ ಮತ್ತಷ್ಟು ಆತಂಖವನ್ನು ತಂದಿದ್ದು, ಕಪಿಲ, ಕಾವೇರಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.